ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂಥಾ ಮಾತು

Published 30 ಏಪ್ರಿಲ್ 2024, 19:53 IST
Last Updated 30 ಏಪ್ರಿಲ್ 2024, 19:53 IST
ಅಕ್ಷರ ಗಾತ್ರ

ಅಪೌಷ್ಟಿಕತೆ ಮತ್ತು ಬಡತನ ಕುರಿತ ಜಾಗತಿಕ ಸೂಚ್ಯಂಕದಲ್ಲಿ ಭಾರತದ ಸ್ಥಾನ ಎಲ್ಲಿದೆ ಎಂಬುದು ಜನರಿಗೆ ತಿಳಿದಿದೆ. ಲೋಕಸಭಾ ಚುನಾವಣೆಯಲ್ಲಿ ಗೆದ್ದು, ಬಿಜೆಪಿಯು ಮತ್ತೆ ಅಧಿಕಾರಕ್ಕೆ ಬಂದರೆ ದೇಶವು 15 ವರ್ಷಗಳಷ್ಟು ಹಿಂದಕ್ಕೆ ಹೋಗಲಿದೆ. ನಿಜವಾದ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಆ ಪಕ್ಷವು ‘ವಿಭಜನೆಯ ರಾಜಕಾರಣ’ ಮಾಡುತ್ತಿದೆ. ಜನರು ಬದಲಾವಣೆಗಾಗಿ ಮತದಾನ ಮಾಡಲಿದ್ದಾರೆ. ಕೇಂದ್ರ ಸರ್ಕಾರವು ಸರ್ಕಾರಿ ಸಂಸ್ಥೆಗಳನ್ನು ದುರುಪಯೋಗ ಮಾಡುತ್ತಿದೆ

ಡಿಂಪಲ್‌ ಯಾದವ್‌, ಸಮಾಜವಾದಿ ಪಕ್ಷದ ಸಂಸದೆ

ಕಾಂಗ್ರೆಸ್‌ ಮುಳುಗುವ ಹಡಗಾಗಿದ್ದು, ಜಗತ್ತಿನ ಯಾವ ಶಕ್ತಿಗೂ ಅದನ್ನು ರಕ್ಷಿಸಲು ಸಾಧ್ಯವಾಗದು. ಸೂರತ್‌ ಮತ್ತು ಇಂದೋರ್‌ನ ಅಭಿವೃದ್ಧಿ ಕಾರ್ಯಗಳನ್ನು ಕಂಡು ಜನರು ಆಡಳಿತಾರೂಢ ಬಿಜೆಪಿಯ ಪರವಾಗಿದ್ದಾರೆ. ಸೂರತ್‌ನಲ್ಲಿ ಬಿಜೆಪಿ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಿರುವುದೇ ಇದಕ್ಕೆ ಸಾಕ್ಷಿ. ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆಯಾದರೆ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು ಕಾಂಗ್ರೆಸ್‌ ಹೇಳುತ್ತದೆ. ಕಾಂಗ್ರೆಸ್‌ನ ಅಭ್ಯರ್ಥಿಗಳೂ ಈ ಹಿಂದೆ 20 ಸಲ ಅವಿರೋಧವಾಗಿ ಆಯ್ಕೆಯಾಗಿದ್ದರು. ಆಗ ಪ್ರಜಾಪ್ರಭುತ್ವಕ್ಕೆ ಅಪಾಯವಾಗಲಿಲ್ಲವೇ?

ರಾಜನಾಥ್‌ ಸಿಂಗ್, ರಕ್ಷಣಾ ಸಚಿವ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT