ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

LS Polls | ನೀತಿಸಂಹಿತೆ ಉಲ್ಲಂಘನೆ: ಬೊಮ್ಮಾಯಿ ವಿರುದ್ಧ ಎಫ್‌ಐಆರ್‌

Published 30 ಏಪ್ರಿಲ್ 2024, 14:00 IST
Last Updated 30 ಏಪ್ರಿಲ್ 2024, 14:00 IST
ಅಕ್ಷರ ಗಾತ್ರ

ಹಾವೇರಿ: ಅನುಮತಿ ಇಲ್ಲದೇ ನಗರದ ವಿದ್ಯಾಸಂಸ್ಥೆಯಲ್ಲಿ ಚುನಾವಣಾ ಪ್ರಚಾರ ಸಭೆ ನಡೆಸಿರುವ ಆರೋಪದ ಮೇರೆಗೆ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ವಿರುದ್ಧ ಹಾವೇರಿ ಶಹರ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಪ್ರಕರಣ ದಾಖಲಾಗಿದೆ.

ಏ.27ರಂದು ಬೊಮ್ಮಾಯಿ ಅವರು ನಗರದ ಆಯುರ್ವೇದ ಕಾಲೇಜಿನಲ್ಲಿ ಪ್ರಚಾರ ಸಭೆ ನಡೆಸಿದ್ದರು. ನೀತಿಸಂಹಿತೆ ಜಾರಿ ಇರುವ ಸಂದರ್ಭದಲ್ಲಿ ಪೂರ್ವಾನುಮತಿ ಇಲ್ಲದೇ ಹಾಗೂ ನೀತಿಸಂಹಿತೆ ಅನ್ವಯ ನಿಷೇಧಿತ ಪ್ರದೇಶವಾದ ವಿದ್ಯಾಸಂಸ್ಥೆಯಲ್ಲಿ ಚುನಾವಣಾ ಪ್ರಚಾರ ಸಭೆ ನಡೆಸಿದ್ದಾರೆ. ಅಲ್ಲದೇ ಫೇಸ್‌ಬುಕ್‌ನಲ್ಲಿ ಸಭೆಯ ಫೋಟೊ ಹಂಚಿಕೊಳ್ಳುವ ಮೂಲಕ ನೀತಿಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಕ್ಷಿಪ್ರ ಕಾರ್ಯಪಡೆ ಮುಖ್ಯಸ್ಥ ರಾಮಕೃಷ್ಣ ದೂರು ದಾಖಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT