ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಐಸಿಸಿ ಸದಸ್ಯ, ಮಾಜಿ ಸಚಿವ ರಾಜ್‌ಕುಮಾರ್‌ ಚೌಹಾಣ್ ಕಾಂಗ್ರೆಸ್‌ಗೆ ರಾಜೀನಾಮೆ

Published 24 ಏಪ್ರಿಲ್ 2024, 10:17 IST
Last Updated 24 ಏಪ್ರಿಲ್ 2024, 10:17 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿ ಮಾಜಿ ಸಚಿವ ಹಾಗೂ ಎಐಸಿಸಿ (ಅಖಿಲ ಭಾರತ ಕಾಂಗ್ರೆಸ್‌ ಸಮಿತಿ) ಸದಸ್ಯ ರಾಜ್‌ಕುಮಾರ್‌ ಚೌಹಾಣ್‌ ಬುಧವಾರ ಕಾಂಗ್ರೆಸ್‌ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಎರಡು ದಿನಗಳ ಹಿಂದೆ ಕಾಂಗ್ರೆಸ್‌ ಶಿಸ್ತು ಸಮಿತಿ ಸಭೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ದೆಹಲಿ ಕಾಂಗ್ರೆಸ್‌ ಉಸ್ತುವಾರಿ ದೀಪಕ್‌ ಬಾಬ್ರಿಯಾ ಅವರೊಂದಿಗೆ ವಾಗ್ವಾದ ನಡೆಸಿದ್ದರು. 

ಈ ಘಟನೆ ನಡೆದ ನಂತರ ರಾಜ್‌ಕುಮಾರ್‌ ಚೌಹಾಣ್‌ ಕಾಂಗ್ರೆಸ್‌ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆಯನ್ನು ಖಚಿತಪಡಿಸಿ ಅವರು ಪಿಟಿಐಗೆ ಸಂದರ್ಶನ ನೀಡಿದ್ದಾರೆ.

ಯಾವ ಕಾರಣಕ್ಕೆ ಅವರು ಪಕ್ಷ ತೊರೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT