ಯೋಜನೆಯನ್ನು ಜಿವಿಕೆ–ಇಎಂಆರ್‌ಐ ಸಂಸ್ಥೆ ನಿರ್ವಹಿಸುತ್ತಿದ್ದು, 2,500 ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ‘ನಿಗದಿಪಡಿಸಿದ ವೇತನದಲ್ಲಿ ಡಿಸೆಂಬರ್ ಹಾಗೂ ಜನವರಿ ತಿಂಗಳಲ್ಲಿ ಅರ್ಧದಷ್ಟು ವೇತನ ಮಾತ್ರ ನೀಡಲಾಗಿದ್ದು, ಕಳೆದ ಮೂರು ತಿಂಗಳಿಂದ ವೇತನ ಪಾವತಿಸಿಲ್ಲ’ ಎಂದು ಆರೋಪಿಸಿರುವ ಸಿಬ್ಬಂದಿ, ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನಿರ್ಧರಿಸಿದ್ದಾರೆ.