ಭಾನುವಾರ, 2 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಶ್ಚಿಮ ಅಫ್ಗಾನಿಸ್ತಾನದಲ್ಲಿ ಪ್ರವಾಹ: 50 ಜನರ ಸಾವು

Published 18 ಮೇ 2024, 7:56 IST
Last Updated 18 ಮೇ 2024, 7:56 IST
ಅಕ್ಷರ ಗಾತ್ರ

ಇಸ್ಲಾಮಾಬಾದ್‌: ಪಶ್ಚಿಮ ಅಫ್ಗಾನಿಸ್ತಾನದ ಘೋರ್‌ ಪ್ರಾಂತ್ಯದಲ್ಲಿ ಭಾರಿ ಮಳೆಯಿಂದ ಹಠಾತ್‌ ಪ್ರವಾಹ ಉಂಟಾಗಿ 50 ಜನರು ಮೃತಪಟ್ಟಿದ್ದಾರೆ ಎಂದು ತಾಲಿಬಾನ್‌ ಸರ್ಕಾರದ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದರು.

ಈ ಸಾವಿನ ಸಂಖ್ಯೆ ಪ್ರಾಥಮಿಕ ವರದಿಯನ್ನು ಆಧರಿಸಿದೆ. ಹಲವು ಜನರು ಕಣ್ಮರೆಯಾಗಿದ್ದು, ಮೃತರ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಘೋರ್‌ ಪ್ರಾಂತೀಯ ಗವರ್ನರ್‌ ವಕ್ತಾರ ಅಬ್ದುಲ್‌ ವಾಹಿದ್‌ ಹಮಾಸ್‌ ತಿಳಿಸಿದರು.

ಶುಕ್ರವಾರ ಉಂಟಾದ ಈ ಪ್ರವಾಹದ ನಂತರ ರಾಜಧಾನಿ ಫಿರೋಜ್ ಕೋಹ್ ಸೇರಿದಂತೆ ಹಲವು ಕಡೆ ಸಾವಿರಾರು ಮನೆಗಳು ಮತ್ತು ಆಸ್ತಿಗಳಿಗೆ ಹಾನಿ ಉಂಟಾಗಿದೆ. ನೂರಾರು ಹೆಕ್ಟೇರ್ ಕೃಷಿ ಭೂಮಿ ನಾಶವಾಗಿದ್ದು, ಈ ಪ್ರಾಂತ್ಯದಲ್ಲಿ ಅಪಾರ ಆರ್ಥಿಕ ನಷ್ಟ ಆಗಿದೆ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT