ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: 986 ಮಳೆ ನೀರು ಇಂಗುಗುಂಡಿ ನಿರ್ಮಾಣ

ಒಂದು ತಿಂಗಳಲ್ಲಿ ಜಲಮಂಡಳಿಯಿಂದ ಕಾರ್ಯಪ್ರಗತಿ
Published 4 ಮೇ 2024, 15:37 IST
Last Updated 4 ಮೇ 2024, 15:37 IST
ಅಕ್ಷರ ಗಾತ್ರ

ಬೆಂಗಳೂರು: ಮಳೆಗಾಲ ಆರಂಭಕ್ಕೆ ಮುನ್ನ 986 ಇಂಗುಗುಂಡಿಗಳನ್ನು ನಿರ್ಮಿಸುವ ಮೂಲಕ ಬೆಂಗಳೂರು ಜಲಮಂಡಳಿಯು ಒಂದು ತಿಂಗಳಲ್ಲಿ ಶೇ 98ರಷ್ಟು ಗುರಿ ಸಾಧಿಸಿದೆ.

ನಗರದಲ್ಲಿ ಜಲಮಂಡಳಿಯ ಅಧೀನದಲ್ಲಿರುವ ಬತ್ತಿ ಹೋಗಿರುವ ಕೊಳವೆ ಬಾವಿಗಳನ್ನು ಮಳೆನೀರು ಇಂಗುಗುಂಡಿಗಳನ್ನಾಗಿ ಪರಿವರ್ತಿಸಬೇಕು ಎಂದು ಜಲಮಂಡಳಿ ಅಧ್ಯಕ್ಷ ಡಾ.ವಿ.ರಾಮ್‌ಪ್ರಸಾತ್‌ ಮನೋಹರ್‌ ಸೂಚನೆ ನೀಡಿದ್ದರು.

1000 ಇಂಗುಗುಂಡಿಗಳನ್ನು ನಿರ್ಮಿಸುವ ಗುರಿ ಹೊಂದಲಾಗಿತು. ವಲಯವಾರು ನಿರ್ಮಿಸಲಾಗುವ ಇಂಗುಗುಂಡಿಗಳ ಮೂಲಕ ಮಳೆಯ ನೀರು ಯಾವುದೇ ಕಲ್ಮಶವಿಲ್ಲದೇ ನೆಲದಡಿಗೆ ಇಳಿಯುವಂತೆ ಮಾಡಲಾಗಿದೆ. ಹಾಗೆಯೇ, ರಸ್ತೆಗಳಲ್ಲಿನ ನೀರು ಹರಿದು ಒಳಚರಂಡಿಗೆ ಸೇರ್ಪಡೆ ಆಗಿ ತೊಂದರೆ ಆಗದಂತೆ ತಡೆಯಲು ಇದು ಸಹಕಾರಿಯಾಗಲಿದೆ ಎಂದು ಜಲಮಂಡಳಿ ಪ್ರಕಟಣೆ ತಿಳಿಸಿದೆ.

74 ಪ್ರಸ್ತಾವ: ಬೆಂಗಳೂರು ನಗರದಲ್ಲಿ ಅಂತರ್ಜಲ ವೃದ್ಧಿಸುವ ಹಾಗೂ ಕೆರೆಗಳಿಗೆ ಮಳೆ ನೀರು ತುಂಬಿಸುವ ಉದ್ದೇಶದಿಂದ ಪ್ರಾರಂಭಿಸಲಾಗಿರುವ ಸಮುದಾಯ ಮಳೆ ಸಂಗ್ರಹಕ್ಕೆ ನಾಗರಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. 74 ಪ್ರಸ್ತಾವಗಳು ಬಂದಿದ್ದು, ಜಲಮಂಡಳಿ ಅಧಿಕಾರಿಗಳು ಇದನ್ನು ಪರಿಶೀಲಿಸಿ, ಶೀಘ್ರವೇ ಯೋಜನೆಗೆ ಚಾಲನೆ ನೀಡಲಿದ್ದಾರೆ.

‘ನಾವು ಇತರರಿಗೆ ಮಾದರಿಯಾಗಬೇಕು ಎನ್ನುವುದು ಉದ್ದೇಶವಾಗಿದೆ. ಸಾರ್ವಜನಿಕರು ಮಳೆ ನೀರು ಇಂಗುಗುಂಡಿಗಳನ್ನು ಕಡ್ಡಾಯವಾಗಿ ನಿರ್ಮಿಸಿಕೊಳ್ಳಿ ಎಂದು ಹೇಳುವ ಮುನ್ನ ಜಲಮಂಡಳಿಯಿಂದಲೇ ಮಳೆ ನೀರು ಇಂಗುಗುಂಡಿಗಳನ್ನು ನಿರ್ಮಿಸಲಾಗಿದೆ. ಕಡಿಮೆ ಸಮಯದಲ್ಲಿ 986 ಇಂಗುಗುಂಡಿಗಳನ್ನು ನಿರ್ಮಿಸಲಾಗಿದೆ. ಹೆಚ್ಚಿನ ಕಡೆಗಳಲ್ಲಿ ನಿರ್ಮಿಸುವ ಮೂಲಕ ಅಂತರ್ಜಲ ವೃದ್ಧಿಗೆ ಒತ್ತುನೀಡಲಾಗುವುದು’ ಎಂದು ರಾಮ್‌ಪ್ರಸಾತ್‌ ಮನೋಹರ್‌ ತಿಳಿಸಿದ್ದಾರೆ.

ಮಳೆನೀರು ಸಂಗ್ರಹ, ಇಂಗುಗುಂಡಿಗಳ ಬಗ್ಗೆ ಜನರಲ್ಲಿ ಜಾಗೃತಿ ಪ್ರತಿ ವಲಯಕ್ಕೂ 250 ಇಂಗುಗುಂಡಿ ನಿರ್ಮಾಣದ ಗುರಿ ಶೇ 98.6ರಷ್ಟು ಸಾಧನೆ ತೋರಿಸಿದ ಅಧಿಕಾರಿಗಳು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT