ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ತುಮಕೂರು ಜಿಲ್ಲೆಯ ಕೆಲವೆಡೆ ಭಾನುವಾರ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವ ಇದೆ. ಕೆಲವೆಡೆ ಮಳೆಯ ಜತೆಗೆ ಬಿಸಿ ಗಾಳಿಯೂ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಬೀದರ್, ಬೆಳಗಾವಿ, ಧಾರವಾಡ, ಗದಗ, ಕಲಬುರಗಿ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಬಳ್ಳಾರಿ, ಬೆಂಗಳೂರು ನಗರ, ಮಂಡ್ಯ ಮತ್ತು ಮೈಸೂರು ಜಿಲ್ಲೆಯಲ್ಲಿ ಶಾಖದ ಅಲೆಯ ವಾತಾವರಣವು ಹೆಚ್ಚಾಗಿರುತ್ತದೆ. ಸೋಮವಾರವೂ ಹಲವೆಡೆ ಬಿಸಿ ಗಾಳಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.