ಸೋಮವಾರ, 17 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್‌: ಡೊನೇಷನ್ ಹಾವಳಿ ತಡೆಗೆ ಎಸ್‌ಎಫ್‌ಐ ಆಗ್ರಹ

Published 16 ಮೇ 2024, 15:17 IST
Last Updated 16 ಮೇ 2024, 15:17 IST
ಅಕ್ಷರ ಗಾತ್ರ

ಬೀದರ್‌: 2024–25ನೇ ಸಾಲಿನಲ್ಲಿ ಖಾಸಗಿ ಶಾಲೆಗಳು ಪ್ರವೇಶದ ಸಂದರ್ಭದಲ್ಲಿ ಟ್ಯೂಷನ್‌ ಶುಲ್ಕ ಹೆಚ್ಚಿಸಿ ಡೊನೇಷನ್‌ ವಸೂಲಿ ಮಾಡುತ್ತಿದ್ದು, ಅದನ್ನು ಜಿಲ್ಲಾಡಳಿತ ತಡೆಯಬೇಕೆಂದು ಭಾರತ ವಿದ್ಯಾರ್ಥಿ ಫೆಡರೇಶನ್‌ (ಎಸ್‌ಎಫ್‌ಐ) ಆಗ್ರಹಿಸಿದೆ.

ಎಸ್.ಎಫ್.ಐ ಜಿಲ್ಲಾಧ್ಯಕ್ಷ ಅರುಣ ಕೋಡಗೆ, ಪ್ರಮುಖರಾದ ಅಮರ ಗಾದಗಿ, ರೋಶನ್ ಮಲ್ಕಾಪೂರೆ ಅವರು ನಗರದಲ್ಲಿ ಗುರುವಾರ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿ ಒತ್ತಾಯಿಸಿದರು.

ಡೊನೇಷನ್ ಹಾವಳಿ ನಿಯಂತ್ರಿಸಬೇಕು. ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಜಿಲ್ಲಾ ರೆಗ್ಯುಲೇಟಿಂಗ್ ಪ್ರಾಧಿಕಾರ ರಚಿಸಿ, ಸರ್ಕಾರದ ನಿಯಮ ಗಾಳಿಗೆ ತೂರಿದ ಶಾಲೆಗಳ ಮಾನ್ಯತೆ ರದ್ದುಪಡಿಸಬೇಕು. ಅನಧಿಕೃತ ಶಾಲೆಗಳ ಮಾನ್ಯತೆ ಇಲ್ಲದೆ ಐಸಿಐಸಿ/ಸಿಬಿಎಸ್ಸಿ ನಡೆಸುವ ಶಾಲೆಗಳ ಮಾನ್ಯತೆ ರದ್ದುಗೊಳಿಸಿ, ಅಧಿಕೃತ ಶಾಲೆಗಳ ಕನ್ನಡ ಮಾಧ್ಯಮ/ಇಂಗ್ಲಿಷ್ ಮಾಧ್ಯಮ ಶಾಲೆಗಳ ಪಟ್ಟಿ ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿದರು. 

ಜಿಲ್ಲೆಯಲ್ಲಿ ಬಹುತೇಕ ಎಲ್ಲ ಖಾಸಗಿ ಶಾಲೆಗಳು ಈಗಾಗಲೇ ಬೇಬಿ ಕ್ಲಾಸಿನಿಂದ ಎಲ್ಲ ತರಗತಿಯ ಪ್ರವೇಶಾತಿಯನ್ನು ಪ್ರಾರಂಭಿಸಿ ವಿದ್ಯಾರ್ಥಿಗಳ ಪಾಲಕರಿಂದ ಮನಬಂದಂತೆ ಡೊನೇಷನ್ ವಸೂಲಿ ಮಾಡುತ್ತಿವೆ. ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಸರ್ಕಾರದ ನಿಯಮ ಮೀರಿ ಹಣ ವಸೂಲಿಗೆ ಮುಂದಾಗಿದ್ದರೂ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಮೌನವಾಗಿದ್ದಾರೆ ಎಂದು ಆರೋಪಿಸಿದರು.

ಸರ್ಕಾರ ಇನ್ನೂ ಈ ವರ್ಷದ ಶೈಕ್ಷಣಿಕ ಪ್ರವೇಶಾತಿಯನ್ನು ಪ್ರಾರಂಭ ಮಾಡದಿದ್ದರೂ ಖಾಸಗಿ ಶಾಲೆಗಳು ತುದಿಗಾಲಲ್ಲಿ ನಿಂತು ಪ್ರವೇಶಾತಿ ಶುಲ್ಕ, ಬಟ್ಟೆ, ಶೂ, ಸಾಕ್ಸ್‌, ನೋಟ್ ಬುಕ್ಸ್ ಗಳನ್ನು ಶಾಲೆಗಳಲ್ಲಿ ಮಾರಾಟ ಮಾಡುತ್ತಿರುವುದು ಕಾನೂನುಬಾಹಿರ. ಇಂತಹ ಶಾಲೆಗಳ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT