ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂಥಾ ಮಾತು

Published 24 ಏಪ್ರಿಲ್ 2024, 23:30 IST
Last Updated 24 ಏಪ್ರಿಲ್ 2024, 23:30 IST
ಅಕ್ಷರ ಗಾತ್ರ

ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಗೆ ಕೇರಳದಲ್ಲಿ ಆಡಳಿತಾರೂಢ ಸಿಪಿಎಂ ಮತ್ತು ಕಾಂಗ್ರೆಸ್‌ ಬೆಂಬಲ ನೀಡುತ್ತಿವೆ. ಪಿಎಫ್‌ಐನ ರಾಜಕೀಯ ಸಂಘಟನೆಯಾದ ಸೋಷಿಯಲ್‌ ಡೆಮಾಕ್ರಟಿಕ್‌ ಪಾರ್ಟಿ ಆಫ್‌ ಇಂಡಿಯಾವು (ಎಸ್‌ಡಿಪಿಐ) ಕಾಂಗ್ರೆಸ್‌ಗೆ ಬಹಿರಂಗವಾಗಿಯೇ ಬೆಂಬಲ ಸೂಚಿಸಿದೆ. ಪಿಎಫ್‌ಐನಂತಹ ಸಂಘಟನೆಗಳಿಂದ ದೇಶವನ್ನು ರಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಯ‍ಪ್ರವೃತ್ತರಾಗಿದ್ದಾರೆ. ಕಮ್ಯುನಿಸ್ಟ್‌ ಮತ್ತು ಕಾಂಗ್ರೆಸ್‌ ಆಡಳಿತದಲ್ಲಿ ಕೇರಳದಲ್ಲಿ ಭಯೋತ್ಪಾದಕರಿಗೆ ರಕ್ಷಣೆ ಸಿಗಲಿದೆ.

–ಅಮಿತ್‌ ಶಾ, ಕೇಂದ್ರ ಗೃಹಸಚಿವ

ಕಾಂಗ್ರೆಸ್‌ ಪಕ್ಷದ ಪ್ರಣಾಳಿಕೆಯು ಜನಪರವಾಗಿದ್ದು, ಹತಾಶೆಯಿಂದ ಕೋಮು ಉದ್ವಿಗ್ನತೆಯನ್ನು ಸೃಷ್ಟಿಸುತ್ತಿರುವ ಬಿಜೆಪಿಗೆ ಆತಂಕವನ್ನು ಉಂಟು ಮಾಡಿದೆ. ಮಹಿಳೆಯರಿಗೆ ಶೇ 50ರಷ್ಟು ಮೀಸಲಾತಿ, ಎಂಎಸ್‌ಪಿಗೆ ಕಾನೂನಿನ ಖಾತರಿ ಸೇರಿದಂತೆ ವಿವಿಧ ಭರವಸೆಗಳನ್ನು ನೀಡುವ ಮೂಲಕ ಕಾಂಗ್ರೆಸ್‌ ಒಳ್ಳೆಯ ಕೆಲಸ ಮಾಡಿದೆ.

–ಮೆಹಬೂಬಾ ಮುಫ್ತಿ, ಪಿಡಿಪಿ ಅಧ್ಯಕ್ಷೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT