ADVERTISEMENT

ಆಟೊ ನೋಂದಣಿ ನೋಟಿಸ್‌ ಜಾರಿಗೆ ಹೈಕೋರ್ಟ್ ಆದೇಶ

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2017, 19:30 IST
Last Updated 20 ನವೆಂಬರ್ 2017, 19:30 IST

ಬೆಂಗಳೂರು: ‘ಯಾವ ಸ್ಥಳಗಳಲ್ಲಿ ಎಲ್‌ಪಿಜಿ ರೆಟ್ರೊಫಿಟ್‌ಮೆಂಟ್‌ (ಹೊಸ ತಂತ್ರಜ್ಞಾನ ಅಳವಡಿಸುವುದು) ಮತ್ತು ಮರು ಇಂಧನ ಪೂರೈಕೆ ಸೌಲಭ್ಯ ಹೊಂದಲಾಗಿದೆಯೋ ಅಂತಹ ಸ್ಥಳಗಳಲ್ಲಿ ಮಾತ್ರವೇ 4–ಸ್ಟ್ರೋಕ್‌ ಎಂಜಿನ್‌ ಹೊಂದಿರುವ ಎಲ್‌ಪಿಜಿ (ದ್ವಿ ಇಂಧನ) ಆಟೊ ರಿಕ್ಷಾ ಕ್ಯಾಬ್‌ಗಳನ್ನು ನೋಂದಾಯಿಸಬೇಕು’ ಎಂಬ ರಾಜ್ಯ ಸರ್ಕಾರದ ಆದೇಶವನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಗಿದೆ.

ಹಾಸನದ ‘ಫಾರ್ಮ್‌ ಪವರ್ ಟ್ರ್ಯಾಕ್ಟರ್‌’ ಸಂಸ್ಥೆ ಸಲ್ಲಿಸಿರುವ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು. ಪ್ರತಿವಾದಿಗಳಾದ ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಉಪ ನಿರ್ದೇಶಕರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆಯನ್ನು ಇದೇ 24ಕ್ಕೆ ಮುಂದೂಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT