ADVERTISEMENT

ಉಕ್ಕಿನ ಕಾರ್ಖಾನೆ ಪುನಶ್ಚೇತನಕ್ಕೆ ಯತ್ನ: ಅನಂತಕುಮಾರ್‌

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2017, 19:30 IST
Last Updated 23 ಸೆಪ್ಟೆಂಬರ್ 2017, 19:30 IST
ಅನಂತಕುಮಾರ್‌
ಅನಂತಕುಮಾರ್‌   

ಬಳ್ಳಾರಿ: ಬಳ್ಳಾರಿ ಜಿಲ್ಲೆಯಲ್ಲಿ ಸ್ಥಗಿತಗೊಂಡಿರುವ ಉಕ್ಕಿನ ಕಾರ್ಖಾನೆಗಳನ್ನು ಪುನಶ್ಚೇತನಗೊಳಿಸಲು ಕೇಂದ್ರದ ಉಕ್ಕು ಸಚಿವ ಚೌಧರಿ ಬೀರೇಂದ್ರ ಸಿಂಗ್‌ ಮತ್ತು ರೈಲ್ವೆ–ಕಲ್ಲಿದ್ದಲು ಸಚಿವ ಪೀಯೂಷ್‌ ಗೋಯಲ್‌ ಅವರೊಂದಿಗೆ ಸಭೆ ನಡೆಸಲಾಗುವುದು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಅನಂತಕುಮಾರ್‌ ಭರವಸೆ ನೀಡಿದರು.

ನಗರದಲ್ಲಿ ಶನಿವಾರ ವೀರಶೈವ ವಿದ್ಯಾವರ್ಧಕ ಸಂಘದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಗಣಿಗಾರಿಕೆ ನಿಂತ ಪರಿಣಾಮ ಲಕ್ಷಾಂತರ ಕಾರ್ಮಿಕರು ಕೆಲಸ ಕಳೆದುಕೊಂಡಿದ್ದಾರೆ. ಅವರೆಲ್ಲರ ಒಳಿತಿಗಾಗಿ ಇಬ್ಬರೂ ಸಚಿವರ ವಿಶೇಷ ಗಮನ ಸೆಳೆಯುತ್ತೇನೆ’ ಎಂದರು. ತುಂಗಭದ್ರಾ ಜಲಾಶಯದಲ್ಲಿನ ಹೂಳು ತೆರವು ಅಸಾಧ್ಯವಾಗಿರುವುದರಿಂದ ಮತ್ತೊಂದು ಜಲಾಶಯ ನಿರ್ಮಾಣ ಅನಿವಾರ್ಯ ಎಂದ ಅವರು, ಕೊಪ್ಪಳ ಜಿಲ್ಲೆಯ ನವಲಿ ಬಳಿ ಪರ್ಯಾಯ ಸಮಾನಾಂತರ ಜಲಾಶಯ ನಿರ್ಮಿಸುವ ಪ್ರಸ್ತಾವವನ್ನು ಗಂಭೀರವಾಗಿ ಪರಿಗಣಿಸುವಂತೆ ಕೇಂದ್ರದ ಜಲಸಂಪನ್ಮೂಲ ಸಚಿವ ನಿತಿನ್‌ ಗಡ್ಕರಿ ಅವರ ಮೇಲೆ ಒತ್ತಡ ಹೇರುವುದಾಗಿಯೂ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT