ADVERTISEMENT

ಕರ್ಣಾಟಕ ಬ್ಯಾಂಕ್‌ಗೆ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2017, 19:30 IST
Last Updated 20 ಏಪ್ರಿಲ್ 2017, 19:30 IST
ನವದೆಹಲಿಯಲ್ಲಿ ಕೇಂದ್ರ ಸಚಿವ ಅರ್ಜುನ್‌ ರಾಮ್‌ ಮೇಘವಾಲ್‌ ಅತ್ಯುತ್ತಮ ಎಂಎಸ್‌ಎಂಇ ಬ್ಯಾಂಕಿಂಗ್‌ ರನ್ನರ್‌ಅಪ್‌ ಪ್ರಶಸ್ತಿಯನ್ನು ಕರ್ಣಾಟಕ ಬ್ಯಾಂಕಿನ ಮಹಾಪ್ರಬಂಧಕ ರಘುರಾಮ್‌ ಅವರಿಗೆ ನೀಡಿದರು
ನವದೆಹಲಿಯಲ್ಲಿ ಕೇಂದ್ರ ಸಚಿವ ಅರ್ಜುನ್‌ ರಾಮ್‌ ಮೇಘವಾಲ್‌ ಅತ್ಯುತ್ತಮ ಎಂಎಸ್‌ಎಂಇ ಬ್ಯಾಂಕಿಂಗ್‌ ರನ್ನರ್‌ಅಪ್‌ ಪ್ರಶಸ್ತಿಯನ್ನು ಕರ್ಣಾಟಕ ಬ್ಯಾಂಕಿನ ಮಹಾಪ್ರಬಂಧಕ ರಘುರಾಮ್‌ ಅವರಿಗೆ ನೀಡಿದರು   

ಮಂಗಳೂರು:  ಭಾರತೀಯ ಲಘು, ಸಣ್ಣ ಮತ್ತು ಮಧ್ಯಮ ವಾಣಿಜ್ಯೋದ್ಯಮ ಸಂಸ್ಥೆ ಕೊಡಮಾಡುವ ಅತ್ಯುತ್ತಮ ಎಂಎಸ್‌ಎಂಇ ಬ್ಯಾಂಕಿಂಗ್‌ ಪ್ರಶಸ್ತಿಯನ್ನು ಕರ್ಣಾಟಕ ಬ್ಯಾಂಕ್‌ ಪಡೆದಿದೆ.

ಸಮುದಾಯ ದಾಯಿತ್ವ ಯೋಜನೆ ಮತ್ತು ವ್ಯಾವಹಾರಿಕ ಹೊಣೆಗಾರಿಕೆ ವಿಭಾಗದಲ್ಲಿ ಕರ್ಣಾಟಕ ಬ್ಯಾಂಕ್‌ ರನ್ನರ್‌ ಅಪ್‌ ಪ್ರಶಸ್ತಿ ಪಡೆದಿದೆ. ಭಾರತೀಯ ಲಘು, ಸಣ್ಣ  ಮತ್ತು ಮಧ್ಯಮ ವಾಣಿಜ್ಯೋದ್ಯಮ ಸಂಸ್ಥೆಯು, ಹಣಕಾಸು ನೆರವಿನ ಮೂಲಕ ಉದ್ಯಮಗಳ ಅಭಿವೃದ್ಧಿಗೆ ನೆರವಾಗುವ ವ್ಯಕ್ತಿಗಳು, ಬ್ಯಾಂಕ್‌ಗಳು ಹಾಗೂ ವೃತ್ತಿಪರರಿಗೆ ಈ ಪ್ರಶಸ್ತಿ ನೀಡುತ್ತಿದೆ.

‘ಕರ್ಣಾಟಕ ಬ್ಯಾಂಕ್‌ ತನ್ನ ಸಾಮಾಜಿಕ ದಾಯಿತ್ವದಡಿ, ಬಡಜನರ ಕಲ್ಯಾಣಕ್ಕೆ ವಿಶೇಷ ಒತ್ತು ನೀಡುತ್ತಿದ್ದು, ಸರ್ಕಾರ ಯೋಜನೆಗಳನ್ನು ಬಡವರಿಗೆ ತಲುಪಿಸುವಲ್ಲಿ ಶ್ರಮಿಸುತ್ತಿದೆ. ಅದರ ಪ್ರತಿಫಲವಾಗಿ ಈ ಪ್ರಶಸ್ತಿ ದೊರೆತಿದೆ’ ಎಂದು ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಮಹಾಬಲೇಶ್ವರ ಎಂ.ಎಸ್. ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.