ADVERTISEMENT

ಚಿನ್ನ ಕಳ್ಳಸಾಗಣೆ 3 ಪಟ್ಟು ಅಧಿಕ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2014, 19:30 IST
Last Updated 19 ಅಕ್ಟೋಬರ್ 2014, 19:30 IST

ನವದೆಹಲಿ(ಪಿಟಿಐ): ಪ್ರಸಕ್ತ ಹಣಕಾಸು ವರ್ಷದಲ್ಲಿ ಚಿನ್ನ ಕಳ್ಳಸಾಗಣೆ ಮೂರು ಪಟ್ಟು ಹೆಚ್ಚಿದ್ದು, ದೇಶದಾದ್ಯಂತ ವಿಮಾನ ನಿಲ್ದಾಣಗಳು, ಬಂದರು ಮತ್ತು ಗಡಿ ಪ್ರದೇಶಗಳಲ್ಲಿ ಹೆಚ್ಚು ನಿಗಾ ವಹಿಸುವಂತೆ ಅಧಿಕಾರಿ­ಗಳಿಗೆ ಸರ್ಕಾರ ಮುನ್ನೆಚ್ಚರಿಕೆ ನೀಡಿದೆ.

ಕಂದಾಯ ಗುಪ್ತಚರ ಮಹಾ ನಿರ್ದೇಶ­ನಾಲಯ (ಡಿಆರ್‌ಐ) ಮತ್ತು ಸೀಮಾ ಸುಂಕ ವಂಚನೆ ತಡೆ ವಿಭಾಗ ಈ ಎಚ್ಚರಿಕೆ ನೀಡಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಏಪ್ರಿಲ್‌–ಸೆಪ್ಟೆಂಬರ್‌ನಲ್ಲಿ ಚಿನ್ನ ಕಳ್ಳ­ಸಾಗ­ಣೆಯ 550 ಪ್ರಕರಣಗಳು ದಾಖ­ಲಾ­ಗಿದ್ದು, ಇನ್ನೂ ಹೆಚ್ಚುವ ಸಾಧ್ಯತೆ­ಗಳಿವೆ ಎಂದು ಮೂಲಗಳು ಹೇಳಿವೆ.

ಚಿನ್ನ ಕಳ್ಳಸಾಗಣೆಗೆ ತಂಪು ಪಾನೀಯ ಬಾಟಲಿಗಳು, ಗೃಹ ಬಳಕೆ ವಸ್ತುಗಳು ಮತ್ತು ಪಾದರಕ್ಷೆಗಳನ್ನು ಬಳಸುವ ಸಾಧ್ಯತೆ ಬಗ್ಗೆಯೂ ಎಚ್ಚರಿಕೆ ನೀಡಿದೆ. ದೀಪಾವಳಿ ಹಬ್ಬದ ಸಂದರ್ಭದಲ್ಲಿ ಚಿನ್ನ ಕಳ್ಳಸಾಗಣೆ ಹೆಚ್ಚುವ ಬಗ್ಗೆ ಕಂದಾಯ ಗುಪ್ತಚರ ಅಧಿಕಾರಿಗಳು ಸಂಶಯ ವ್ಯಕ್ತಪಡಿಸಿದ್ದಾರೆ. ಕಳೆದ 3 ವರ್ಷದಲ್ಲಿ ಒಟ್ಟು 852 ಕೋಟಿ ಮೌಲ್ಯದ ಚಿನ್ನ ಜಪ್ತಿ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.