ADVERTISEMENT

ನಿಲ್ಲದ ಸೂಚ್ಯಂಕದ ಓಟ

ಷೇರುಪೇಟೆಯಲ್ಲಿ ಸಕಾರಾತ್ಮಕ ವಹಿವಾಟು: 3 ವಾರದಲ್ಲಿ 1,596 ಅಂಶ ಏರಿಕೆ

ಪಿಟಿಐ
Published 21 ಏಪ್ರಿಲ್ 2018, 19:30 IST
Last Updated 21 ಏಪ್ರಿಲ್ 2018, 19:30 IST
ನಿಲ್ಲದ ಸೂಚ್ಯಂಕದ ಓಟ
ನಿಲ್ಲದ ಸೂಚ್ಯಂಕದ ಓಟ   

ಮುಂಬೈ: ದೇಶದ ಷೇರುಪೇಟೆಗಳಲ್ಲಿ ಸತತ ನಾಲ್ಕನೇ ವಾರವೂ ಗರಿಷ್ಠ ಮಟ್ಟದಲ್ಲಿ ವಹಿವಾಟು ಅಂತ್ಯವಾಗಿದೆ.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ (ಬಿಎಸ್‌ಇ) 222 ಅಂಶ ಏರಿಕೆ ಕಂಡು 34,415 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ.

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್‌ಎಸ್‌ಇ) ನಿಫ್ಟಿ 83 ಅಂಶ ಏರಿಕೆ ಕಂಡು, 10,564 ಅಂಶಗಳಲ್ಲಿ ವಾರದ ವಹಿವಾಟು ಅಂತ್ಯಕಂಡಿದೆ.

ADVERTISEMENT

ಈ ಬಾರಿ ಮುಂಗಾರು ಸಾಮಾನ್ಯವಾಗಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರ ಜತೆಗೆ ಕಂಪನಿಗಳ ತ್ರೈಮಾಸಿಕ ಆರ್ಥಿಕ ಸಾಧನೆಯು ಮಾರುಕಟ್ಟೆ ನಿರೀಕ್ಷೆಯಂತೆಯೇ ಇರುವುದರಿಂದ ಹೂಡಿಕೆ ಚಟುವಟಿಕೆ ಹೆಚ್ಚಾಗುತ್ತಿದೆ. ಇದು ಸೂಚ್ಯಂಕವನ್ನು ಏರುಮುಖವಾಗಿರುವಂತೆ ಮಾಡಿದೆ ಎಂದು ತಜ್ಞರು ಹೇಳಿದ್ದಾರೆ.

ಸಗಟು ಹಣದುಬ್ಬರದ ಇಳಿಕೆ ಹಾಗೂ ಕೆಲವು ನಿರ್ದಿಷ್ಟ ಷೇರುಗಳ ಉತ್ತಮ ಗಳಿಕೆಯಿಂದಾಗಿ ಜಾಗತಿಕ ಮಟ್ಟದಲ್ಲಿ ಅಮೆರಿಕ ಮತ್ತು ಸಿರಿಯಾ ಮಧ್ಯೆ ಮೂಡಿರುವ ಬಿಕ್ಕಟ್ಟನ್ನು ಮರೆತು ಸೂಚ್ಯಂಕ ಏರಿಕೆ ಓಟವನ್ನು ಮುಂದುವರಿಸುವಂತೆ ಮಾಡಿದೆ ಎಂದು ವಿಶ್ಲೇಷಣೆ ಮಾಡಿದ್ದಾರೆ.

ತೈಲ ಮತ್ತು ಅನಿಲ, ಬ್ಯಾಂಕಿಂಗ್‌, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಲಾಭ ಗಳಿಕೆ ಉದ್ದೇಶದ ವಹಿವಾಟಿಗೆ ಒಳಗಾದವು.

ತ್ರೈಮಾಸಿಕ ಸಾಧನೆ: ನಾಲ್ಕನೇ ತ್ರೈಮಾಸಿಕದಲ್ಲಿ ಟಿಸಿಎಸ್‌ ಮತ್ತು ಮೈಂಡ್‌ ಟ್ರೀ ಸಂಸ್ಥೆಗಳ ಆರ್ಥಿಕ ಪ್ರಗತಿ ಮಾರುಕಟ್ಟೆಯ ನಿರೀಕ್ಷೆಯ ಮಟ್ಟದಲ್ಲಿದೆ. ಇದು ಐ.ಟಿ ವಲಯದಲ್ಲಿ ಹೂಡಿಕೆ ಹೆಚ್ಚಾಗುವಂತೆ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.