ADVERTISEMENT

ನಿವೃತ್ತಿ ದಿನವೇ ಪಿಎಫ್‌ ಇತ್ಯರ್ಥಕ್ಕೆ ನಿರ್ದೇಶನ

ಪಿಟಿಐ
Published 19 ಜುಲೈ 2017, 19:30 IST
Last Updated 19 ಜುಲೈ 2017, 19:30 IST

ನವದೆಹಲಿ: ಉದ್ಯೋಗಿಗಳು ನಿವೃತ್ತರಾಗುವ ದಿನವೇ ಪಿಂಚಣಿ ಪ್ರಯೋಜನಗಳನ್ನು ಇತ್ಯರ್ಥಪಡಿಸಬೇಕು ಎಂದು ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆಯು (ಇಪಿಎಫ್‌ಒ) ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.

‘ಉದ್ಯೋಗಿಗಳ ಭವಿಷ್ಯ ನಿಧಿ (ಇಪಿಎಫ್‌) ಯೋಜನೆ 1952 ಮತ್ತು ಪಿಂಚಣಿ ಯೋಜನೆ 1995ರ ಹಣ ಪಾವತಿ ಮತ್ತು ಪಿಂಚಣಿ ಸೌಲಭ್ಯಗಳನ್ನು ನಿವೃತ್ತರಾಗುವ ದಿನವೇ ಇತ್ಯರ್ಥಪಡಿಸಲು ಸೂಚಿಸಲಾಗಿದೆ’ ಎಂದು ಕೇಂದ್ರ ಕಾರ್ಮಿಕ ಸಚಿವ ಬಂಡಾರು ದತ್ತಾತ್ರೇಯ ಅವರು  ರಾಜ್ಯಸಭೆಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT