ADVERTISEMENT

ನ. 16 ರಿಂದ ಐ.ಟಿ ಮೇಳ

ಕೌಶಲ ಅಭಿವೃದ್ಧಿಗೆ ಹೆಚ್ಚು ಒತ್ತು: ಪ್ರಿಯಾಂಕ್‌ ಖರ್ಗೆ

​ಪ್ರಜಾವಾಣಿ ವಾರ್ತೆ
Published 24 ಜುಲೈ 2017, 19:30 IST
Last Updated 24 ಜುಲೈ 2017, 19:30 IST
ಇನ್ಫೊಸಿಸ್‌ ಸಹ ಸಂಸ್ಥಾಪಕ ಕ್ರಿಸ್‌ ಗೋಪಾಲಕೃಷ್ಣ, ಐಟಿ–ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಉದ್ಯಮಿ ಕಿರಣ್‌ ಮಜುಮ್‌ದಾರ್ ಷಾ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದರು 	- ಪ್ರಜಾವಾಣಿ ಚಿತ್ರ
ಇನ್ಫೊಸಿಸ್‌ ಸಹ ಸಂಸ್ಥಾಪಕ ಕ್ರಿಸ್‌ ಗೋಪಾಲಕೃಷ್ಣ, ಐಟಿ–ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಉದ್ಯಮಿ ಕಿರಣ್‌ ಮಜುಮ್‌ದಾರ್ ಷಾ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದರು - ಪ್ರಜಾವಾಣಿ ಚಿತ್ರ   

ಬೆಂಗಳೂರು: ‘ಬೆಂಗಳೂರು ಐ.ಟಿ ಬಿಝ್‌ ಮತ್ತು ಇಂಡಿಯಾ ಬಯೊ 2017’ ಅನ್ನು ನವೆಂಬರ್‌ 16 ರಿಂದ 18 ರವರೆಗೆ ನಗರದ ಅರಮನೆ ಆವರಣದಲ್ಲಿ ನಡೆಸಲಾಗುವುದು’ ಎಂದು ರಾಜ್ಯ ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ  ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದರು.

ಸೋಮವಾರ ಮಾಧ್ಯಮ ಗೋಷ್ಠಿಯಲ್ಲಿ  ಮಾತನಾಡಿದ ಅವರು, ‘ಈ ಬಾರಿ ಕೌಶಲ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿದ್ದೇವೆ. ‘ಕಲ್ಪಿಸಿ, ನವೀಕರಿಸಿ ಮತ್ತು ಸಂಶೋಧಿಸಿ’ ಎಂಬ ಹೆಸರಿನಲ್ಲಿ ಸಮಾವೇಶ ನಡೆಯಲಿದೆ’ ಎಂದರು.

‘ಈ  ಬಾರಿ 300 ಪ್ರದರ್ಶಕರು ತಮ್ಮ ಉತ್ಪನ್ನ ಮತ್ತು ತಂತ್ರಜ್ಞಾನಗಳನ್ನು ಪ್ರದರ್ಶಿಸಲಿದ್ದಾರೆ. 10,000 ವಾಣಿಜ್ಯೋದ್ಯಮಿಗಳು ಭೇಟಿ ನೀಡುವ ನಿರೀಕ್ಷೆ ಇದೆ.

‘ಮಾಹಿತಿ ತಂತ್ರಜ್ಞಾನ ಸಮಾವೇಶದಲ್ಲಿ ಕ್ಲೌಡ್‌, ಬಿಗ್‌ ಡೇಟಾ, ವೈಮಾನಿಕ, ರಕ್ಷಣೆ, ದೂರ ಸಂಪರ್ಕ, ಎಲೆಕ್ಟ್ರಾನಿಕ್ಸ್‌, ಸೈಬರ್ ಸೆಕ್ಯುರಿಟಿ, ಎವಿಜಿಸಿ, ರೋಬಾಟಿಕ್ಸ್‌, ಬ್ಲಾಕ್‌ಚೈನ್‌ ಮುಂತಾದವುಗಳ ಬಗ್ಗೆ ವಿಚಾರಗೋಷ್ಠಿಗಳು ನಡೆಯಲಿವೆ’ ಎಂದರು.

ಬಯೊಕಾನ್‌ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಕಿರಣ್‌ ಮಜುಮ್‌ದಾರ್ ಷಾ ಮಾತನಾಡಿ, ‘ಜೈವಿಕ ತಂತ್ರಜ್ಞಾನ ಕ್ಷೇತ್ರದಲ್ಲಿನ ಇತ್ತೀಚಿನ ಆವಿಷ್ಕಾರಗಳ ಪ್ರದರ್ಶನವೂ ಇರಲಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.