ADVERTISEMENT

ಪಾತಾಳಕ್ಕೆ ಕುಸಿದ ಸೂಚ್ಯಂಕ: ಷೇರು ಮಾರುಕಟ್ಟೆಯಲ್ಲಿ ತಲ್ಲಣ

ಸೂಚ್ಯಂಕ ಪಾತಾಳಕ್ಕೆ, ರೂಪಾಯಿ ಪ್ರಪಾತಕ್ಕೆ

​ಪ್ರಜಾವಾಣಿ ವಾರ್ತೆ
Published 24 ಆಗಸ್ಟ್ 2015, 5:56 IST
Last Updated 24 ಆಗಸ್ಟ್ 2015, 5:56 IST

ಮುಂಬೈ: ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಸೋಮವಾರದ ಬೆಳಗಿನ ವಹಿವಾಟಿನಲ್ಲಿ ಸಾರ್ವಕಾಲಿಕ ದಾಖಲೆ ಮಟ್ಟದಲ್ಲಿ 1085 ಅಂಶಗಳಷ್ಟು ಭಾರಿ ಕುಸಿತ ಕಂಡಿದೆ.

ಕಳೆದ ಒಂದು ವರ್ಷದಲ್ಲಿ ಸೂಚ್ಯಂಕ ಇಷ್ಟು ದೊಡ್ಡ ಪ್ರಮಾಣದಲ್ಲಿ ದಿನವೊಂದರ ವಹಿವಾಟಿನಲ್ಲಿ ಕುಸಿತ ಕಾಣುತ್ತಿರುವುದು ಇದೇ ಮೊದಲು.

ಚೀನಾ ಕರೆನ್ಸಿ ಅಪಮೌಲ್ಯದಿಂದಾಗಿ  ಶಾಂಘೈ ಷೇರು ವಿನಿಮಯ ಕೇಂದ್ರ ಪಾತಾಳಕ್ಕೆ ಕುಸಿದಿದೆ. ಇದರ ದಿಢೀರ್‌ ಪರಿಣಾಮ ಮುಂಬೈ ಷೇರುಪೇಟೆಯ ಮೇಲೂ ಆಗಿದೆ. ಇದರ ಜತೆಗೆ ಕೇಂದ್ರ ಸರ್ಕಾರ ಕನಿಷ್ಠ ಪರ್ಯಾಯ ತೆರಿಗೆ (ಎಂಎಟಿ) ವಿಚಾರದಲ್ಲಿ ತೆಗೆದುಕೊಂಡಿರುವ ನಿಲುವು ಕೂಡ ಷೇರುಪೇಟೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ ಎಂದು ಮಾರುಕಟ್ಟೆ ತಜ್ಞರು ವಿಶ್ಲೇಷಿಸಿದ್ದಾರೆ.

ರೂಪಾಯಿ ದಾಖಲೆ ಕುಸಿತ:  ಡಾಲರ್‌ ವಿರುದ್ಧ ರೂಪಾಯಿ ವಿನಿಮಯ ಮೌಲ್ಯ ಸೋಮವಾರ ಕಳೆದ ಎರಡು ವರ್ಷಗಳಲ್ಲೇ ಕನಿಷ್ಠ ಮಟ್ಟವಾದ ರೂ 66.47ಕ್ಕೆ ಕುಸಿದಿದೆ.  

ರೂಪಾಯಿ ಅಪಮೌಲ್ಯ ತಪ್ಪಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ, ಅಗತ್ಯ ಬಿದ್ದರೆ ವಿದೇಶಿ ವಿನಿಮಯ ಮಾರುಕಟ್ಟೆಗೆ ಮಧ್ಯಪ್ರವೇಶ ಮಾಡುವುದಾಗಿ ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಗವರ್ನರ್‌ ರಘುರಾಂ ರಾಜನ್‌ ಹೇಳಿದ್ದಾರೆ.

ಸದ್ಯ ಬಿಎಸ್‌ಇ 26,410 ಅಂಶಗಳಲ್ಲಿ ವಹಿವಾಟು ನಡೆಸುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.