ನವದೆಹಲಿ : ರಿಲಯನ್ಸ್, ವಿಪ್ರೊ ಅಲ್ಟ್ರಾಟೆಕ್ ಸಿಮೆಂಟ್, ಕೋಟಕ್ ಮಹೀಂದ್ರ ಬ್ಯಾಂಕ್, ಮಾರುತಿ ಸುಜುಕಿ ಇಂಡಿಯಾ ಸೇರಿದಂತೆ ಅನೇಕ ಅಗ್ರಮಾನ್ಯ ಕಂಪೆನಿಗಳ ತ್ರೈಮಾಸಿಕ ಫಲಿತಾಂಶ ಈ ವಾರದ ಷೇರುಪೇಟೆಯ ವಹಿವಾಟಿನ ದಿಕ್ಕನ್ನು ನಿರ್ಧರಿಸಲಿದೆ.
ಫ್ರಾನ್ಸ್ ಚುನಾವಣೆ ಫಲಿತಾಂಶ, ಅಮೆರಿಕ ಮತ್ತು ಉತ್ತರ ಕೋರಿಯಾ ನಡುವಿನ ಶೀತಲ ಸಮರದಂತಹ ಜಾಗತಿಕ ವಿದ್ಯಮಾನಗಳು ಜಾಗತಿಕ ಮತ್ತು ದೇಶೀಯ ಮಾರುಕಟ್ಟೆಯ ಮೇಲೆ ನೇರ ಪರಿಣಾಮ ಬೀರಲಿವೆ.
ಈ ಎಲ್ಲ ಸಂಗತಿಗಳನ್ನು ಹೂಡಿಕೆದಾರರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಎಂದು ಹೂಡಿಕೆ ಮತ್ತು ಮಾರುಕಟ್ಟೆ ತಜ್ಞರು ವಿಶ್ಲೇಷಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.