ADVERTISEMENT

ಮಾರ್ಚ್ ಅಂತ್ಯಕ್ಕೆ ವಿಲೀನ ಪ್ರಕ್ರಿಯೆ ಪೂರ್ಣ

​ಪ್ರಜಾವಾಣಿ ವಾರ್ತೆ
Published 29 ಜುಲೈ 2016, 19:30 IST
Last Updated 29 ಜುಲೈ 2016, 19:30 IST
ಅರುಂಧತಿ
ಅರುಂಧತಿ   

ನವದೆಹಲಿ (ಪಿಟಿಐ): ‘ಸಹವರ್ತಿ ಬ್ಯಾಂಕ್‌ಗಳ ಸ್ವಾಧೀನ ಪ್ರಕ್ರಿಯೆಯು 2017ರ ಮಾರ್ಚ್‌ ಅಂತ್ಯದ ಹೊತ್ತಿಗೆ ಪೂರ್ಣಗೊಳ್ಳಲಿದೆ’ ಎಂದು ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದ ಅಧ್ಯಕ್ಷೆ ಅರುಂಧತಿ ಭಟ್ಟಾಚಾರ್ಯ ಹೇಳಿದ್ದಾರೆ.

ವಿಲೀನ ವಿರೋಧಿಸಿ ಬ್ಯಾಂಕ್‌ ನೌಕರರು ಶುಕ್ರವಾರ ದೇಶದಾದ್ಯಂತ ಮುಷ್ಕರ ನಡೆಸಿದ ಬೆನ್ನಲ್ಲೇ ಭಟ್ಟಾಚಾರ್ಯ ಅವರು ಈ ಹೇಳಿಕೆ ಪುನರುಚ್ಛರಿಸಿದ್ದಾರೆ.
‘ಬದಲಾವಣೆ (ವಿಲೀನ) ಅನಿವಾರ್ಯ ಎಂಬುದನ್ನು ಜನರು ತಿಳಿದುಕೊಂಡಿದ್ದಾರೆ. ಹಲವಾರು ಸಂದರ್ಭಗಳಲ್ಲಿ ಬ್ಯಾಂಕ್‌ ನೌಕರರು ಮುಷ್ಕರ ನಡೆಸಿದ್ದಾರೆ. ವಿಲೀನ ವಿರೋಧಿಸಿ ಮುಷ್ಕರ ನಡೆಸಿದವರನ್ನು ನಾವು ವಿಶ್ವಾಸಕ್ಕೆ ತೆಗೆದುಕೊಳ್ಳಲಿದ್ದೇವೆ’ ಎಂದು ಅವರು ಹೇಳಿದ್ದಾರೆ.

ಐದು ಸಹವರ್ತಿ ಬ್ಯಾಂಕ್‌ಗಳ ವಿಲೀನಕ್ಕೆ ಸಂಬಂಧಿಸಿದಂತೆ ಎಸ್‌ಬಿಐ  ವರದಿ ಸಿದ್ಧಪಡಿಸುತ್ತಿದೆ. 1955ರ ಎಸ್‌ಬಿಐನ ಕಾಯ್ದೆಯ ಸೆಕ್ಷನ್‌ 35ರಂತೆ ಅದನ್ನು ಸರ್ಕಾರದ ಅಂತಿಮ ಒಪ್ಪಿಗೆಗೆ ಕಳುಹಿಸಲಿದೆ.

ಗವರ್ನರ್‌ ಹುದ್ದೆ: ‘ಭಾರತೀಯ ರಿಸರ್ವ್‌ ಬ್ಯಾಂಕ್‌ನ ಗವರ್ನರ್‌ ಹುದ್ದೆಗೆ ನನ್ನ ಹೆಸರು ಪರಿಶೀಲನೆಯಲ್ಲಿ ಇರುವುದು ಮಾಧ್ಯಮಗಳ ಊಹೆಯಾಗಿದೆ’ ಎಂದು ಅಭಿಪ್ರಾಯಪಟ್ಟಿರುವ ಅರುಂಧತಿ ಅವರು, ‘ಈ ಬಗ್ಗೆ ಏನನ್ನೂ ಹೇಳಲಾರೆ’ ಎಂದೂ ಪ್ರತಿಕ್ರಿಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.