ADVERTISEMENT

ಷೇರುಪೇಟೆಯಲ್ಲಿ ಗೂಳಿ ಓಟ: ಸೂಚ್ಯಂಕ 500 ಅಂಶ ಏರಿಕೆ

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2015, 6:44 IST
Last Updated 18 ಸೆಪ್ಟೆಂಬರ್ 2015, 6:44 IST

ಮುಂಬೈ (ಪಿಟಿಐ): ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ (ಬಿಎಸ್‌ಇ) ಶುಕ್ರವಾರ ಬೆಳಗಿನ ವಹಿವಾಟಿನಲ್ಲಿ 500 ಅಂಶಗಳಷ್ಟು ಜಿಗಿತ ಕಂಡಿದೆ. ರಾಷ್ಟ್ರೀಯ ಷೇರು ಸೂಚ್ಯಂಕ ‘ನಿಫ್ಟಿ’ ಕೂಡ 8 ಸಾವಿರ ಅಂಶಗಳ ಗಡಿ ದಾಟಿದ್ದು, ಪೇಟೆಯಲ್ಲಿ ಗೂಳಿ ಓಟ ಮುಂದುವರಿದಿದೆ.

ಅಮೆರಿಕದ ಸೆಂಟ್ರಲ್ ಬ್ಯಾಂಕ್‌ ಬಡ್ಡಿ ದರ ಕಡಿತದ ನಿರ್ಧಾರವನ್ನು ಶುಕ್ರವಾರ ಪ್ರಕಟಿಸಿದ್ದು, ಈ ಬಾರಿಯೂ ಯಾವುದೇ ವ್ಯತ್ಯಾಸ ಮಾಡದೆ ಯಥಾಸ್ಥಿತಿ ಕಾಯ್ದುಕೊಂಡಿದೆ. ಹೀಗಾಗಿ ಬಿಎಸ್‌ಇ ಸೇರಿದಂತೆ ಜಾಗತಿಕ ಪೇಟೆಗಳು ಶುಕ್ರವಾರ ಏರಿಕೆ ಕಂಡಿವೆ.

ಸದ್ಯ ಬಿಎಸ್‌ಇ 26,465 ಅಂಶಗಳಲ್ಲಿ ವಹಿವಾಟು ನಡೆಸುತ್ತಿದ್ದು ಷೇರುಗಳ ಖರೀದಿ ಭರಾಟೆ ಜೋರಾಗಿದೆ.  ರಿಯಲ್‌ ಎಸ್ಟೇಟ್‌, ವಾಹನ ಉದ್ಯಮ, ಇಂಧನ ವಲಯ, ಐಟಿ ಮತ್ತು ಬ್ಯಾಂಕಿಂಗ್‌ ಕ್ಷೇತ್ರದ ಕಂಪೆನಿಗಳು ಗರಿಷ್ಠ ಲಾಭ ಮಾಡಿಕೊಂಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.