ADVERTISEMENT

ಸಣ್ಣ ಉಳಿತಾಯ: ಬ್ಯಾಂಕ್‌ಗಳಲ್ಲಿಯೂ ಲಭ್ಯ

ಪಿಟಿಐ
Published 20 ಅಕ್ಟೋಬರ್ 2017, 19:30 IST
Last Updated 20 ಅಕ್ಟೋಬರ್ 2017, 19:30 IST

ನವದೆಹಲಿ (ಪಿಟಿಐ): ಈಗ ಅಂಚೆ ಕಚೇರಿಗಳಲ್ಲಿ ಮಾತ್ರ ಲಭ್ಯವಿರುವ ಸಣ್ಣ ಉಳಿತಾಯ ಯೋಜನೆಗಳನ್ನು ಇನ್ನುಮುಂದೆ ಬ್ಯಾಂಕ್‌ಗಳಿಗೂ ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳಲ್ಲದೆ, ಖಾಸಗಿ ವಲಯದ ಐಸಿಐಸಿಐ ಬ್ಯಾಂಕ್, ಎಚ್‌ಡಿಎಫ್‌ಸಿ ಬ್ಯಾಂಕ್ ಮತ್ತು ಆ್ಯಕ್ಸಿಸ್‌ ಬ್ಯಾಂಕ್‌ಗಳೂ ಸಹ ರಾಷ್ಟ್ರೀಯ ಉಳಿತಾಯ ಯೋಜನೆ (ಎನ್‌ಎಸ್‌ಇ), ಆರ್‌.ಡಿ ಮತ್ತು ತಿಂಗಳ ಉಳಿತಾಯ ಉಳಿತಾಯ ಯೋಜನೆಗಳಡಿ ಠೇವಣಿ ಸಂಗ್ರಹಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಸಣ್ಣ ಉಳಿತಾಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದೆ.

ADVERTISEMENT

ಸದ್ಯ ಬ್ಯಾಂಕ್‌ಗಳಲ್ಲಿ ಪಿಪಿಎಫ್‌, ಕಿಸಾನ್‌ ವಿಕಾಸ ಪತ್ರ, ಸುಕನ್ಯಾ ಸಮೃದ್ಧಿ ಖಾತೆ ಮತ್ತು ಹಿರಿಯ ನಾಗರಿಕರ ಉಳಿತಾಯ ಯೋಜನೆಗಳಲ್ಲಿ ಹೂಡಿಕೆ ಮಾಡಲು ಅವಕಾಶ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.