ADVERTISEMENT

ಸರಕು ಸಾಗಣೆ ಸೇವೆಗೆ ಸಿದ್ಧತೆ

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2016, 19:48 IST
Last Updated 10 ಫೆಬ್ರುವರಿ 2016, 19:48 IST

ನವದೆಹಲಿ (ಪಿಟಿಐ): ಖಾಸಗಿ ವಿಮಾನಯಾನ ಸಂಸ್ಥೆ ಸ್ಪೈಸ್‌ ಜೆಟ್‌  ಸರಕು ಸಾಗಣೆ ಕ್ಷೇತ್ರಕ್ಕೆ ಕಾಲಿಡಲು ಸಿದ್ಧತೆ ನಡೆಸಿದೆ.

ಗ್ರಾಹಕರ ಮನೆ ಬಾಗಿಲಿಗೆ ಸರಕುಗಳನ್ನು ತಲುಪಿಸುವ ಸೇವೆ ಆರಂಭಿಸುವ ಯೋಚನೆ ಹೊಂದಿರುವ ಕಂಪೆನಿಯು ಈಗಾಗಲೇ 100 ಸರಕು ಸಾಗಣೆ  ಟ್ರಕ್‌  ಹಾಗೂ ದೇಶದ ಪ್ರಮುಖ ಸ್ಥಳಗಳಲ್ಲಿ 40 ಉಗ್ರಾಣಗಳನ್ನು ಕಾಯ್ದಿರಿಸಿದೆ.

ಮಾರ್ಚ್‌ ಒಳಗಾಗಿ ಸರಕು ಸಾಗಣೆ ಸೇವೆ ಆರಂಭವಾಗುವ ನಿರೀಕ್ಷೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.