ADVERTISEMENT

ಸರ್ಕಾರಿ ಸ್ವಾಮ್ಯದ 6 ಬ್ಯಾಂಕ್‌ಗಳು ಷೇರುಪೇಟೆಗೆ

ಪಿಟಿಐ
Published 22 ಏಪ್ರಿಲ್ 2017, 19:33 IST
Last Updated 22 ಏಪ್ರಿಲ್ 2017, 19:33 IST

ನವದೆಹಲಿ:  ಬಂಡವಾಳ ಸಾಮರ್ಥ್ಯ ಹೆಚ್ಚಿಸಿಕೊಳ್ಳಲು ಸರ್ಕಾರಿ ಸ್ವಾಮ್ಯದ 6 ಬ್ಯಾಂಕ್‌ಗಳು ಷೇರುಪೇಟೆ ಪ್ರವೇಶಿಸಲಿವೆ.

ಪ್ರಸಕ್ತ ಹಣಕಾಸು ವರ್ಷದಲ್ಲಿ ಸಾರ್ವಜನಿಕ ನೀಡಿಕೆ (ಎಫ್‌ಪಿಒ) ಮೂಲಕ ಬಂಡವಾಳ ಸಂಗ್ರಹಿಸಲು ಕೇಂದ್ರ ಹಣಕಾಸು ಸಚಿವಾಲಯ ಅನುಮತಿ ನೀಡಿದೆ.
ಯಾವಾಗ ಮತ್ತು ಎಷ್ಟು ಪ್ರಮಾಣದಲ್ಲಿ ಬಂಡವಾಳ ಸಂಗ್ರಹಿಸಬೇಕು ಎನ್ನುವ ನಿರ್ಧಾರವನ್ನು ಆಯಾ ಬ್ಯಾಂಕ್‌ಗಳಿಗೆ ನೀಡಲಾಗಿದೆ. ಮೊದಲ ಹಂತದಲ್ಲಿ, ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ, ಬ್ಯಾಂಕ್‌ ಆಫ್‌ ಬರೋಡಾ ಸೇರಿದಂತೆ ಒಟ್ಟು 6 ಬ್ಯಾಂಕ್‌ಗಳಿಗೆ ಅವಕಾಶ ನೀಡಲಾಗಿದೆ ಎಂದು ಸಚಿವಾಲಯದ ಪ್ರಕಟಣೆ ತಿಳಿಸಿದೆ.

2019ರ ಮಾರ್ಚ್‌ನಿಂದ ಅಂತರರಾಷ್ಟ್ರೀಯ ಬ್ಯಾಂಕಿಂಗ್‌ ಮಾನದಂಡ ‘ಬಾಸೆಲ್‌–3’ ಅಳವಡಿಸಿಕೊಳ್ಳಲು ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳಿಗೆ ಒಟ್ಟು ₹1.80 ಲಕ್ಷ ಕೋಟಿ ಅಗತ್ಯವಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.