ADVERTISEMENT

ಸೂಚ್ಯಂಕ 206 ಅಂಶ ಇಳಿಕೆ

ಪಿಟಿಐ
Published 23 ಮೇ 2017, 19:30 IST
Last Updated 23 ಮೇ 2017, 19:30 IST

ಮುಂಬೈ: ಲಾಭ ಗಳಿಕೆ ಉದ್ದೇಶದ ವಹಿವಾಟಿನ ಪ್ರಭಾವಕ್ಕೆ ಒಳಗಾಗಿ ದೇಶಿ ಷೇರುಪೇಟೆಗಳ ವಹಿವಾಟು ಮಂಗಳವಾರ ಇಳಿಕೆ ಕಂಡಿತು.

ಮುಂಬೈ ಷೇರುಪೇಟೆ ಸಂವೇದಿಸೂಚ್ಯಂಕವು (ಬಿಎಸ್‌ಇ) 206 ಅಂಶ ಇಳಿಕೆಯಾಗಿ, 30,365 ಅಂಶಗಳಲ್ಲಿ ಮತ್ತು ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್‌ಎಸ್ಇ) ನಿಫ್ಟಿ 52 ಅಂಶ ಇಳಿಕೆ ಕಂಡು, 9,386  ಅಂಶಗಳಲ್ಲಿ ವಹಿವಾಟು ಅಂತ್ಯಕಂಡಿದೆ.

ಭಾರತ–ಪಾಕ್ ಗಡಿ ನಿಯಂತ್ರಣ ರೇಖೆ ಬಳಿ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿರುವುದರಿಂದ ಷೇರುಪೇಟೆಯಲ್ಲಿ ಲಾಭ ಗಳಿಕೆ ಉದ್ದೇಶದ ವಹಿವಾಟು ನಡೆಯಿತು. ಇದರಿಂದ ಸೂಚ್ಯಂಕಗಳು ಇಳಿಕೆ ಕಂಡಿವೆ ಎಂದು ತಜ್ಞರು ಹೇಳಿದ್ದಾರೆ.

ADVERTISEMENT

ಜಿಎಸ್‌ಟಿಯಲ್ಲಿ ಗ್ರಾಹಕ ಬಳಕೆ ವಸ್ತುಗಳಿಗೆ ನಿರೀಕ್ಷೆಗಿಂತಲೂ ಹೆಚ್ಚಿನ ತೆರಿಗೆ ನಿಗದಿಯಾಗಿರುವುದೂ ಸಹ ವಹಿವಾಟಿನ ಮೇಲೆ ಋಣಾತ್ಮಕ ಪ್ರಭಾವ ಬೀರಿದೆ ಎಂದು ವಿಶ್ಲೇಷಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.