ADVERTISEMENT

ಸೂಚ್ಯಂಕ 276 ಅಂಶ ಏರಿಕೆ

ಪಿಟಿಐ
Published 23 ಆಗಸ್ಟ್ 2017, 19:30 IST
Last Updated 23 ಆಗಸ್ಟ್ 2017, 19:30 IST
ಸೂಚ್ಯಂಕ 276 ಅಂಶ ಏರಿಕೆ
ಸೂಚ್ಯಂಕ 276 ಅಂಶ ಏರಿಕೆ   

ಮುಂಬೈ: ಇನ್ನಷ್ಟು ಬ್ಯಾಂಕ್‌ಗಳ ವಿಲೀನಕ್ಕೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿರುವ ಸುದ್ದಿಯು ಷೇರುಪೇಟೆಯಲ್ಲಿ ಬುಧವಾರ ಬ್ಯಾಂಕಿಂಗ್‌ ವಲಯದ ಷೇರುಗಳ ಏರಿಕೆಗೆ ಕಾರಣವಾಯಿತು. ಇದರಿಂದ ಸಕಾರಾತ್ಮಕ ವಹಿವಾಟು ನಡೆಯಿತು.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ (ಬಿಎಸ್‌ಇ) 276 ಅಂಶ ಏರಿಕೆ ಕಂಡು 31,593 ಅಂಶಗಳಲ್ಲಿ ವಹಿವಾಟು ಅಂತ್ಯಕಂಡಿತು. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್ಎಸ್‌ಇ) 86 ಅಂಶ ಹೆಚ್ಚಾಗಿ 9,857 ಅಂಶಗಳಲ್ಲಿ ವಹಿವಾಟು ಅಂತ್ಯಕಂಡಿದೆ.

ಸರ್ಕಾರಿ ಸ್ವಾಮ್ಯದ ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌, ಬ್ಯಾಂಕ್ ಆಫ್ ಬರೋಡಾ, ಅಲಹಾಬಾದ್ ಬ್ಯಾಂಕ್‌, ಯೂನಿಯನ್‌ ಬ್ಯಾಂಕ್‌ ಆಫ್ ಇಂಡಿಯಾ ಮತ್ತು ಬ್ಯಾಂಕ್‌ ಆಫ್‌ ಇಂಡಿಯಾ ವಿಲೀನಕ್ಕೆ ಸಂಪುಟ ಒಪ್ಪಿಗೆ ನೀಡಿದೆ. ಇದರಿಂದ ಬ್ಯಾಂಕಿಂಗ್‌ ಷೇರುಗಳು
ಶೇ 4 ರಷ್ಟು ಏರಿಕೆ ಕಂಡಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.