ADVERTISEMENT

ಸೂಚ್ಯಂಕ 374 ಅಂಶ ಕುಸಿತ

ಪಿಟಿಐ
Published 26 ಸೆಪ್ಟೆಂಬರ್ 2016, 19:30 IST
Last Updated 26 ಸೆಪ್ಟೆಂಬರ್ 2016, 19:30 IST

ಮುಂಬೈ: ಅಂತರರಾಷ್ಟ್ರೀಯ ವಿದ್ಯಮಾನಗಳ ಪ್ರಭಾವಕ್ಕೆ ಒಳಗಾಗಿ ಸೋಮವಾರದ ವಹಿವಾಟಿನಲ್ಲಿ ಭಾರತವೂ ಸೇರಿದಂತೆ ಜಾಗತಿಕ ಮಟ್ಟದಲ್ಲಿ  ಷೇರುಪೇಟೆಗಳು ಕುಸಿತ ಅನುಭವಿಸಿವೆ.

ಮುಖ್ಯವಾಗಿ ಅಮೆರಿಕದ ಅಧ್ಯಕ್ಷೀಯ ಚುನಾವಣೆಗೆ ಸಂಬಂಧಿಸಿದ ಚರ್ಚೆ ಹಾಗೂ ಕಚ್ಚಾ ತೈಲ ಉತ್ಪಾದನೆಗೆ ಸಂಬಂಧಿಸಿದಂತೆ ‘ಒಪೆಕ್‌’ ರಾಷ್ಟ್ರಗಳು ಈ ವಾರ ಸಭೆ ಸೇರಿ ನಿರ್ಧಾರ ಕೈಗೊಳ್ಳಲಿವೆ. ಈ ವಿದ್ಯಮಾನಗಳು ಷೇರುಪೇಟೆಗಳ ಮೇಲೆ ಋಣಾತ್ಮಕ ಪ್ರಭಾವ ಬೀರಿವೆ.

ಭಾರತದ ಮಟ್ಟಿಗೆ, ಅಕ್ಟೋಬರ್‌ 4 ರಂದು ಆರ್‌ಬಿಐ ಹಣಕಾಸು ನೀತಿ ಪರಾಮರ್ಶೆ ನಡೆಸಲಿದೆ. ಹೊಸ ಗವರ್ನರ್‌ ಉರ್ಜಿತ್‌ ಪಟೇಲ್‌ ಯಾವ ರೀತಿಯ ನಿರ್ಧಾರ ಪ್ರಕಟಿಸಲಿದ್ದಾರೆ ಎನ್ನುವುದು ಎಲ್ಲರ ಕುತೂಹಲ ಕೆರಳಿಸಿದೆ. ಹಣಕಾಸು ನೀತಿ ಸಮಿತಿ(ಎಂಪಿಸಿ) ಮೊದಲ ಬಾರಿಗೆ  ಬಡ್ಡಿದರ ನಿಗದಿ ಮಾಲಿದೆ. ಹೀಗಾಗಿ ಹೂಡಿಕೆದಾರರು ಕಾದು ನೋಡುವ ತಂತ್ರಕ್ಕೆ ಮೊರೆಹೋಗಿದ್ದಾರೆ.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕವು ಸೋಮವಾರ 374 ಅಂಶ ಕುಸಿದು, 28,294 ಅಂಶಗಳಲ್ಲಿ ವಹಿವಾಟು ಅಂತ್ಯಕಂಡಿತು. ಇದು ಒಂದು ತಿಂಗಳ ಕನಿಷ್ಠವಾಗಿದೆ. ಎನ್‌ಎಸ್‌ಇ ನಿಫ್ಟಿ 108 ಅಂಶ ಇಳಿಕೆಯಾಗಿ 8,723 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.