ADVERTISEMENT

ಹುಂಡೈ ಕಾರ್ ಪ್ರಚಾರ ಅಭಿಯಾನಕ್ಕೆ ಚಾಲನೆ

ಪಿಟಿಐ
Published 16 ಅಕ್ಟೋಬರ್ 2017, 19:51 IST
Last Updated 16 ಅಕ್ಟೋಬರ್ 2017, 19:51 IST

ನವದೆಹಲಿ: ಕಾರು ತಯಾರಿಕೆಯಲ್ಲಿ ದೇಶದ ಅತಿದೊಡ್ಡ ಸಂಸ್ಥೆಯಾಗಿರುವ ಹುಂಡೈ ಮೋಟಾರ್‌ ಇಂಡಿಯಾ, ದೇಶದಾದ್ಯಂತ ಗ್ರಾಮೀಣ ಪ್ರದೇಶಗಳಲ್ಲಿ ‘ಹುಂಡೈ ಅನುಭವ’ ಪ್ರಚಾರ ಅಭಿಯಾನಕ್ಕೆ ಚಾಲನೆ ನೀಡಿದೆ.

ಹಬ್ಬದ ಸಂದರ್ಭದಲ್ಲಿ ಗ್ರಾಹಕರ ಜತೆ ನೇರ ಸಂಪರ್ಕ ಸಾಧಿಸುವ ಉದ್ದೇಶದಿಂದ 418 ಗ್ರಾಮೀಣ ಪ್ರದೇಶದಲ್ಲಿ ಈ ಅಭಿಯಾನ ಹಮ್ಮಿಕೊಳ್ಳಲಾಗಿದೆ.

ಸಣ್ಣ ಪಟ್ಟಣ ಮತ್ತು ಗ್ರಾಮಗಳಲ್ಲಿ ಹುಂಡೈನ ವಿವಿಧ ಕಾರುಗಳ ಮೆರವಣಿಗೆ ಮೂಲಕ ಗ್ರಾಮೀಣ ಮಾರುಕಟ್ಟೆಯಲ್ಲಿ ಸಂಸ್ಥೆಯ ಕಾರುಗಳಿಗೆ ವ್ಯಾಪಕ ಪ್ರಚಾರ ನೀಡುವುದು. ಸ್ಥಳೀಯ ಗ್ರಾಹಕರನ್ನು ತಲುಪುವುದು ಈ ಅಭಿಯಾನದ ಉದ್ದೇಶವಾಗಿದೆ. ಸಂಸ್ಥೆಯ ಜಾಗತಿಕ ಗುಣಮಟ್ಟದ ಕಾರುಗಳನ್ನು ಮೂರು ತಿಂಗಳ ಕಾಲ ಗ್ರಾಮೀಣ ಪ್ರದೇಶಗಳ ಜನರಿಗೆ ಪರಿಚಯಿಸಲು ಉದ್ದೇಶಿಸಲಾಗಿದೆ.

ADVERTISEMENT

‘ಮಾರುಕಟ್ಟೆಯು ತ್ವರಿತವಾಗಿ ಬೆಳವಣಿಗೆ ದಾಖಲಿಸುತ್ತಿರುವ ಗ್ರಾಮೀಣ ಪ್ರದೇಶದಲ್ಲಿ ಹುಂಡೈ ಬ್ರ್ಯಾಂಡ್ ಜನಪ್ರಿಯಗೊಳಿಸಲು ಉದ್ದೇಶಿಸಲಾಗಿದೆ. ಜಾಗತಿಕ ತಂತ್ರಜ್ಞಾನ ಮತ್ತು ಆಕರ್ಷಕ ಸೌಲಭ್ಯಗಳನ್ನು ಒಳಗೊಂಡ ಕಾರ್‌ಗಳ ಮೂಲಕ ಇಂತಹ ಮಾರುಕಟ್ಟೆಯಲ್ಲಿ ಹುಂಡೈ ಬ್ರ್ಯಾಂಡ್‌ ಜನಪ್ರಿಯಗೊಳಿಸಲು ಸಾಧ್ಯವಾಗಲಿದೆ’ ಎಂದು ಸಂಸ್ಥೆಯ ಮಾರಾಟ ವಿಭಾಗದ ನಿರ್ದೇಶಕ ಶ್ರೀವಾಸ್ತವ  ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.