ADVERTISEMENT

₹ 29 ಸಾವಿರದ ಗಡಿ ದಾಟಿದ ಬಂಗಾರ

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2016, 19:30 IST
Last Updated 12 ಫೆಬ್ರುವರಿ 2016, 19:30 IST

ಮುಂಬೈ (ಪಿಟಿಐ): ಚಿನ್ನದ ಬೆಲೆ ಮತ್ತೆ ಏರಿಕೆಯ ಹಾದಿಗೆ ಮರಳಿದ್ದು, ಶುಕ್ರವಾರ ಇಲ್ಲಿಯ ಚಿನಿವಾರ ಪೇಟೆಯಲ್ಲಿ ತಲಾ 10 ಗ್ರಾಂಗಳಿಗೆ ₹ 29 ಸಾವಿರದ ಗಡಿ ದಾಟಿದೆ.

ಬೇಡಿಕೆ ಹೆಚ್ಚುತ್ತಿರುವುದರಿಂದ ಬೆಲೆಯು 20 ತಿಂಗಳ ಹಿಂದಿನ ಗರಿಷ್ಠ ಮಟ್ಟಕ್ಕೆ ತಲುಪಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಅನಿಶ್ಚಿತತೆ ಮುಂದುವರೆದಿರುವುದು ಮತ್ತು ಕರೆನ್ಸಿ ಮಾರುಕಟ್ಟೆಯಲ್ಲಿ ಭಾರಿ ಏರಿಳಿತ ಕಂಡು ಬರುತ್ತಿರುವುದರಿಂದ  ಚಿನ್ನಕ್ಕೆ ಬೇಡಿಕೆ ಹೆಚ್ಚುತ್ತಿದೆ.

ಮುಂಬರುವ ದಿನಗಳಲ್ಲಿ ಬರುವ ಹಬ್ಬ ಹರಿದಿನಗಳು ಮತ್ತು ಮದುವೆ ಸಮಾರಂಭಗಳಲ್ಲಿ ಬೇಡಿಕೆ ಹೆಚ್ಚಳವಾಗುವುದರಿಂದ ದರ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದುನಿರೀಕ್ಷಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.