ADVERTISEMENT

₹ 11 ಲಕ್ಷ ಕೋಟಿ ಕೃಷಿ ಸಾಲ ಗುರಿ

ಪಿಟಿಐ
Published 24 ಏಪ್ರಿಲ್ 2018, 19:30 IST
Last Updated 24 ಏಪ್ರಿಲ್ 2018, 19:30 IST

ನವದೆಹಲಿ: ‘ಪ್ರಸಕ್ತ ಆರ್ಥಿಕ ವರ್ಷದಲ್ಲಿ (2018–19) ₹ 11 ಲಕ್ಷ ಕೋಟಿ ಕೃಷಿ ಸಾಲ ನೀಡುವ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ’ ಎಂದು ಕೃಷಿ ಇಲಾಖೆ ಜಂಟಿ ಕಾರ್ಯದರ್ಶಿ ಆಶಿಶ್‌ ಕುಮಾರ್‌ ಭೂತಾನಿ ತಿಳಿಸಿದ್ದಾರೆ.

‘2017–18ರಲ್ಲಿ ಕೃಷಿ ಕ್ಷೇತ್ರಕ್ಕೆ ₹10 ಲಕ್ಷ ಕೋಟಿ ಸಾಲ ನೀಡಲಾಗಿತ್ತು. ಅದರಲ್ಲಿ ₹ 6.8 ಲಕ್ಷ ಕೋಟಿ ಅಲ್ಪಾವಧಿ ಬೆಳೆ ಸಾಲವಾಗಿದೆ. ಒಟ್ಟು ಸಾಲದಲ್ಲಿ ಶೇ 50 ರಷ್ಟು ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ನೀಡಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.

ಭಾರತೀಯ ವಾಣಿಜ್ಯೋದ್ಯಮ ಮಹಾಸಂಘಗಳ ಒಕ್ಕೂಟದ (ಫಿಕ್ಕಿ) ಕಾರ್ಯಕ್ರಮದ ಸಂದರ್ಭದಲ್ಲಿ ಅವರು ಮಾತನಾಡಿದರು.

ADVERTISEMENT

‘ಸಣ್ಣ ರೈತರಿಗೆ ಹಾಗೂ ಗುತ್ತಿಗೆಗೆ ಜಮೀನು ಪಡೆದು ಕೃಷಿ ಚುಟುವಟಿಕೆ ನಡೆಸುವವರಿಗೆ ಹೆಚ್ಚಿನ ಸಾಲ ಸಿಗುವಂತಾಗಬೇಕು. ಈ ನಿಟ್ಟಿನಲ್ಲಿ ಸಾರಂಗಿ ಸಮಿತಿಯ ಶಿಫಾರಸಿನಂತೆ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಸಾಲ ನೀಡಿಕೆಯಲ್ಲಿ ಹೆಚ್ಚಳ ಮಾಡುವಂತೆ ಕೃಷಿ ಸಚಿವಾಲಯವು ಕೇಂದ್ರ ಸಚಿವ ಸಂಪುಟದ ಮುಂದೆ ಶೀಘ್ರವೇ ಪ್ರಸ್ತಾವ ಸಲ್ಲಿಸಲಿದೆ ಎಂದು ತಿಳಿಸಿದ್ದಾರೆ.

ಉತ್ಪಾದನಾ ವೆಚ್ಚ ಹೆಚ್ಚುತ್ತಿರುವುದು ಹಾಗೂ ವರಮಾನ ತಗ್ಗುತ್ತಿರುವುದರಿಂದ ರೈತರು ಸಂಕಷ್ಟದಲ್ಲಿದ್ದಾರೆ. ಅವರಿಗೆ ಹೆಚ್ಚಿನ ನೆರವು ನೀಡಬೇಕಿದೆ ಎಂದು ನಬಾರ್ಡ್‌ ಹೇಳಿದೆ.

**

ಕೃಷಿ ಸಾಲವನ್ನು ವಿತರಣೆ ಮಾಡುವುದಕ್ಕಿಂತಲೂ ಅರ್ಹರಿಗೆ ಅದನ್ನು ತಲುಪುವಂತೆ ನೋಡಿಕೊಳ್ಳುವುದು ದೊಡ್ಡ ಸವಾಲು
– ಆಶಿಶ್‌ ಕುಮಾರ್‌ ಭೂತಾನಿ, ಕೃಷಿ ಇಲಾಖೆ ಜಂಟಿ ಕಾರ್ಯದರ್ಶಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.