ADVERTISEMENT

150 ಮೆಗಾವಾಟ್ ಸೌರ ವಿದ್ಯುತ್‌ಗೆ ಒಪ್ಪಂದ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2014, 19:30 IST
Last Updated 18 ಡಿಸೆಂಬರ್ 2014, 19:30 IST

ಸುವರ್ಣ ವಿಧಾನಸೌಧ (ಬೆಳಗಾವಿ): ರಾಜ್ಯದಲ್ಲಿ 150 ಮೆಗಾವಾಟ್ ಸೌರವಿದ್ಯುತ್ ಉತ್ಪಾದನೆಗೆ ಎಡಿಸನ್ ಮತ್ತು ಈಲ್ಡ್ ಕೋಸ್ ಸಂಸ್ಥೆ ಜತೆಗೆ ಇಂಧನ ಇಲಾಖೆ ಗುರುವಾರ ಒಪ್ಪಂದ ಮಾಡಿಕೊಂಡಿದೆ.

ಇಲ್ಲಿ ನಡೆದ ಸಮಾರಂಭದಲ್ಲಿ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಸಮ್ಮುಖದಲ್ಲಿ ಹೆಸ್ಕಾಂ, ಬೆಸ್ಕಾಂ ವಿದ್ಯುತ್ ಖರೀದಿ ಒಪ್ಪಂದಗಳಿಗೆ ಸಹಿ ಹಾಕಿದವು. ಇಂಧನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಎಡಿಸನ್ ಸಂಸ್ಥೆಯ ಏಷ್ಯಾ ಪೆಸಿಫಿಕ್ ವಿಭಾಗದ ವ್ಯವಸ್ಥಾಪಕ ನಿರ್ದೇಶಕ ಪಶುಪತಿ ಗೋಪಾಲನ್, ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿ ಖುಷ್ಬೂ ಗೋಯಲ್ ಚೌಧರಿ, ಬೆಸ್ಕಾಂ ನಿರ್ದೇಶಕ (ತಾಂತ್ರಿಕ) ನಾಗೇಶ್, ಕೆಆರ್ಇಡಿಎಲ್ ವ್ಯವಸ್ಥಾಪಕ ನಿರ್ದೇಶಕ ಜಿ.ವಿ.ಬಲರಾಂ ಉಪಸ್ಥಿತರಿದ್ದರು.

ಮೇ ತಿಂಗಳಿನಲ್ಲಿ ರಾಜ್ಯ ಸರ್ಕಾರ ಸೌರ ವಿದ್ಯುತ್ ಯೋಜನೆ ಪ್ರಕಟಿಸಿದ ಬಳಿಕ 500 ಮೆಗಾವಾಟ್ ಸೌರವಿದ್ಯುತ್ ಉತ್ಪಾದನೆಗೆ ಕೆಆರ್ಇಡಿಎಲ್ ಟೆಂಡರ್ ಆಹ್ವಾನಿಸಿತ್ತು. ಎಡಿಸನ್ ಸಂಸ್ಥೆಯು ಐದು ಯೋಜನೆಗಳ ಮೂಲಕ 150 ಮೆಗಾವಾಟ್ ವಿದ್ಯುತ್ ಉತ್ಪಾದನೆ ಮಾಡಲಿದೆ. ಈ ವಿದ್ಯುತ್ತನ್ನು ವಿತರಣಾ ಕಂಪೆನಿಗಳು ಖರೀದಿ ಮಾಡಲಿವೆ ಎಂದು ಶಿವಕುಮಾರ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.