ADVERTISEMENT

ಆರೋಗ್ಯ ಪಾನೀಯ ಪಟ್ಟಿ: ಬೋರ್ನ್‌ವೀಟಾಗೆ ಕೊಕ್‌

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2024, 13:59 IST
Last Updated 21 ಏಪ್ರಿಲ್ 2024, 13:59 IST
   

ನವದೆಹಲಿ:‌‌ ಬೋರ್ನ್‌ ವೀಟಾ ಸೇರಿ ವಿವಿಧ ಪಾನೀಯಗಳನ್ನು ‘ಆರೋಗ್ಯ ಪಾನೀಯ’ಗಳ ಪಟ್ಟಿಯಿಂದ ತೆಗೆದು ಹಾಕುವಂತೆ ಇ–ಕಾಮರ್ಸ್‌ ಕಂಪನಿಗಳಿಗೆ ಕೇಂದ್ರ ಸರ್ಕಾರವು ಸೂಚಿಸಿದೆ.

ಆರೋಗ್ಯ ಪಾನೀಯ ಕುರಿತು ಎಫ್‌ಎಸ್‌ಎಸ್ ಕಾಯ್ದೆ 2006ರ ಅಡಿ ವ್ಯಾಖ್ಯಾನಿಸಲಾಗಿದೆ. ಆದರೆ, ಕೆಲವು ಪಾನೀಯಗಳಲ್ಲಿ ಸ್ವೀಕಾರಾರ್ಹ ‍ಪ್ರಮಾಣಕ್ಕಿಂತಲೂ ಹೆಚ್ಚಿನ ಮಟ್ಟದಲ್ಲಿ ಸಕ್ಕರೆ ಅಂಶವಿರುವ ಬಗ್ಗೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ನಡೆಸಿದ ತನಿಖೆಯಲ್ಲಿ ಬಯಲಾಗಿದೆ.

ಹಾಗಾಗಿ, ಅಂತಹ ಪಾನೀಯಗಳನ್ನು ಇ–ಕಾಮರ್ಸ್‌ ಕಂಪನಿಗಳು ತಮ್ಮ ವೇದಿಕೆಗಳಲ್ಲಿ ಇರುವ ಆರೋಗ್ಯ ಪಾನೀಯಗಳ ವಿಭಾಗದಲ್ಲಿ ಪ್ರದರ್ಶಿಸಬಾರದು ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯವು ಆದೇಶ ಹೊರಡಿಸಿದೆ. 

ADVERTISEMENT

ಹಾಲಿನ ಉತ್ಪನ್ನ, ಕಾಳುಗಳು ಅಥವಾ ಮಾಲ್ಟ್ ಆಧಾರಿತ ಪಾನೀಯಗಳನ್ನು ಇ–ಕಾಮರ್ಸ್‌ ವೇದಿಕೆಗಳಲ್ಲಿ ಆರೋಗ್ಯ ಪಾನೀಯ ಗಳು, ಶಕ್ತಿವರ್ಧಕ ಪೇಯಗಳೆಂದು ಪ್ರದರ್ಶನ ಮಾಡದಂತೆ ಇ–ಕಾಮರ್ಸ್ ಕಂಪನಿಗಳಿಗೆ ಭಾರತದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರವು ಇತ್ತೀಚೆಗೆ
ಸೂಚಿಸಿತ್ತು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.