ADVERTISEMENT

ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಶೀಘ್ರ ಜಾರಿ

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2017, 6:39 IST
Last Updated 14 ಅಕ್ಟೋಬರ್ 2017, 6:39 IST

ಹೊನ್ನಾಳಿ: ತಾಲ್ಲೂಕಿನ ಚೀಲೂರು ಜಿಲ್ಲಾ ಪಂಚಾಯ್ತಿ ಕ್ಷೇತ್ರ ವ್ಯಾಪ್ತಿಯ ಕೆಂಗಟ್ಟೆ, ಕೂಗೋನಹಳ್ಳಿ, ಒಡೆಯರ ಹತ್ತೂರು, ದೊಡ್ಡೆತ್ತಿನಹಳ್ಳಿ ಒಳಗೊಂಡಂತೆ ವಿವಿಧ ಹಳ್ಳಿಗಳ ಕೆರೆಗಳಿಗೆ ತುಂಗಭದ್ರಾ ನದಿಯಿಂದ ನೀರು ತುಂಬಿಸುವ ಯೋಜನೆ ಶೀಘ್ರವೇ ಜಾರಿಯಾಗಲಿದೆ ಎಂದು ಶಾಸಕ ಡಿ.ಜಿ.ಶಾಂತನಗೌಡ ಹೇಳಿದರು.

ತಾಲ್ಲೂಕಿನ ಕೆಂಗಟ್ಟೆ ಕೆರೆಗೆ ತುಂಗಾ ಕಾಲುವೆ ಮೂಲಕ ಹಾಗೂ ಮಳೆಯಿಂದ ತುಂಬಿಕೊಂಡಿದ್ದರಿಂದ ಶುಕ್ರವಾರ ಬಾಗಿನ ಅರ್ಪಿಸಿ ಅವರು ಮಾತನಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಅಧಿಕ ಅನುದಾನ ಬಿಡುಗಡೆ ಮಾಡುತ್ತಿದ್ದಾರೆ.

ಮುಂದಿನ ಬಜೆಟ್‌ನಲ್ಲಿ ತಾಲ್ಲೂಕಿನ ಇತರ ಹೋಬಳಿಗಳ ಎಲ್ಲಾ ಕೆರೆಗಳಿಗೂ ನೀರು ತುಂಬಿಸುವ ಯೋಜನೆಗಳ ಅನುಷ್ಠಾನಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.

ADVERTISEMENT

ಜಿಲ್ಲಾ ಪಂಚಾಯ್ತಿ ಸದಸ್ಯ ಡಿ.ಜಿ.ವಿಶ್ವನಾಥ್ ಮಾತನಾಡಿ, ‘ಚೀಲೂರು, ಮತ್ತು ಕೆಂಗಟ್ಟೆ ಕೆರೆಗಳು ತುಂಬಿಕೊಂಡಿದ್ದರಿಂದ ಈ ಭಾಗದಲ್ಲಿ ಅಂತರ್ಜಲ ಮಟ್ಟ ಹೆಚ್ಚಿದೆ. ಇದರಿಂದ
ತೋಟಗಾರಿಕೆ ಬೆಳೆಗಳಿಗೆ ಹೆಚ್ಚಿನ ಅನುಕೂಲ ಆಗಲಿದೆ.

ಇದರಿಂದ ರೈತರು ನೆಮ್ಮದಿಯಿಂದ ಇದ್ದಾರೆ’ ಎಂದರು. ಎಪಿಎಂಸಿ ನಿರ್ದೇಶಕಿ ಶಾರದಮ್ಮ ಬಸವನಗೌಡ, ಗ್ರಾಮ ಪಂಚಾಯ್ತಿ ಸದಸ್ಯ ಹಾಲೇಶ ನಾಯ್ಕ, ಮುಖಂಡ ಎಲ್.ಬಿ.ಸೋಮಶೇಖರ್, ಚೀಲೂರು ಹಾಗೂ ಕೆಂಗಟ್ಟೆ ಗ್ರಾಮಸ್ಥರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.