ADVERTISEMENT

ಕೊಡಗಿನಲ್ಲಿ ಧಾರಾಕಾರ ಮಳೆ

​ಪ್ರಜಾವಾಣಿ ವಾರ್ತೆ
Published 7 ನವೆಂಬರ್ 2017, 8:26 IST
Last Updated 7 ನವೆಂಬರ್ 2017, 8:26 IST

ಮಡಿಕೇರಿ: ಕೊಡಗು ಜಿಲ್ಲೆಯ ವಿವಿಧೆಡೆ ಸೋಮವಾರ ಧಾರಾಕಾರ ಮಳೆ ಸುರಿಯಿತು. ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣವಿತ್ತು. ಸಂಜೆ ಮಡಿಕೇರಿಯಲ್ಲಿ ಒಂದು ತಾಸು ಗುಡುಗು ಸಹಿತ ಮಳೆ ಆರ್ಭಟಿಸಿತು.

ನಾಪೋಕ್ಲು, ಭಾಗಮಂಡಲ, ತಲಕಾವೇರಿ, ಸಿದ್ದಾಪುರ, ನೆಲ್ಯಹುದಿಕೇರಿ, ಚೆಟ್ಟಳ್ಳಿ, ಸುಂಟಿಕೊಪ್ಪ ವ್ಯಾಪ್ತಿಯಲ್ಲೂ ಮಳೆ ಸುರಿದಿದೆ. ಜಿಲ್ಲೆಯ ಕೆಲವು ಕಡೆ ಕಾಫಿ ಕೊಯ್ಲು ಆರಂಭವಾಗಿದ್ದು ಮಳೆ ಅಡ್ಡಿಪಡಿಸಿತು. ಇದೇ ರೀತಿ ಮಳೆ ಮುಂದುವರಿದರೆ ಕಾಫಿ ಹಣ್ಣು ಉದುರಿ ನಷ್ಟ ಉಂಟಾಗಲಿದೆ ಎಂದು ಬೆಳೆಗಾರರು ಆತಂಕ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT