ADVERTISEMENT

ಭೂ ಸುಧಾರಣೆ ತಿದ್ದುಪಡಿ ಮಸೂದೆಗೆ ಒಪ್ಪಿಗೆ

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2017, 19:40 IST
Last Updated 27 ಮಾರ್ಚ್ 2017, 19:40 IST

ಬೆಂಗಳೂರು: ಖಾಸಗಿ ಜಮೀನಿನಲ್ಲಿ ಮನೆ ಕಟ್ಟಿಕೊಂಡವರಿಗೆ ಹಕ್ಕುಪತ್ರ ನೀಡುವ ಕರ್ನಾಟಕ ಭೂ ಸುಧಾರಣೆಗಳ (ತಿದ್ದುಪಡಿ) ಮಸೂದೆಗೆ ವಿಧಾನ ಪರಿಷತ್ತಿನಲ್ಲಿ ಸೋಮವಾರ ಅನುಮೋದನೆ ನೀಡಲಾಯಿತು.

ಇದಕ್ಕೂ ಮುನ್ನ ಮಾತನಾಡಿದ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ, ‘ಸರ್ಕಾರ ಕೇವಲ ಕಾಯ್ದೆ ತಂದರೆ ಸಾಲದು, ಅದರ ಅನುಷ್ಠಾನಕ್ಕೆ ಬದ್ಧವಾಗಬೇಕು. ಈಗಾಗಲೇ ಸರ್ಕಾರಿ ಜಮೀನಿನಲ್ಲಿ ಮನೆ ಕಟ್ಟಿಕೊಂಡವರಿಗೆ ಹಕ್ಕುಪತ್ರ ನೀಡುವುದಕ್ಕಾಗಿ ಕಾಯ್ದೆ ತಂದು ನಾಲ್ಕು ವರ್ಷವಾದರೂ ಅರ್ಜಿಗಳ ಇತ್ಯರ್ಥ ಆಗಿಲ್ಲ. ಈಗ ಮತ್ತೆ ಎರಡು ವರ್ಷ  ವಿಸ್ತರಿಸಲಾಗಿದೆ. ಅದೇ ರೀತಿ ಇಲ್ಲೂ ಆಗಬಾರದು’ ಎಂದರು.

‘ಈ ಕಾಯ್ದೆಯಡಿ ಅರ್ಜಿ ಸಲ್ಲಿಸಬೇಕಾದರೆ ಸ್ವಂತ ಮನೆ, ಜಮೀನು ಹೊಂದಿರಬಾರದು ಮತ್ತು ಅವರು ಸರ್ಕಾರಕ್ಕೆ ತೆರಿಗೆ ಪಾವತಿದಾರರು ಆಗಿರಬಾರದು’ ಎಂಬ ಸ್ಪಷ್ಟ ನಿಯಮಗಳನ್ನು ರೂಪಿಸಬೇಕು ಎಂದು ವಿ.ಎಸ್. ಉಗ್ರಪ್ಪ ಸಲಹೆ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.