ADVERTISEMENT

ಹೊಳೆಹೊನ್ನೂರು ಆರೋಗ್ಯ ಕೇಂದ್ರಕ್ಕೆ ಕಾಗೋಡು ಭೇಟಿ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2017, 9:38 IST
Last Updated 16 ಸೆಪ್ಟೆಂಬರ್ 2017, 9:38 IST
ಹೊಳೆಹೊನ್ನೂರಿನ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅವರು ಜಿ.ಪಂ. ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ಆರ್.ರೇಖಾ ಉಮೇಶ್ ಅವರಿಂದ ಮಾಹಿತಿ ಪಡೆದರು
ಹೊಳೆಹೊನ್ನೂರಿನ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅವರು ಜಿ.ಪಂ. ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ಆರ್.ರೇಖಾ ಉಮೇಶ್ ಅವರಿಂದ ಮಾಹಿತಿ ಪಡೆದರು   

ಹೊಳೆಹೊನ್ನೂರು: ಇಲ್ಲಿನ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅವರು ಈಚೆಗೆ ದಿಢೀರ್‌ ಭೇಟಿ ನೀಡಿ ಆಸ್ಪತ್ರೆ ಹಾಗೂ ಸ್ಥಳೀಯ ಸಮಸ್ಯೆಗಳ ಬಗ್ಗೆ ಸಾರ್ವಜನಿಕರಿಂದ ಅಹವಾಲು ಆಲಿಸಿದರು.

ಜಿಲ್ಲಾ ಪಂಚಾಯ್ತಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ಡಿ.ಆರ್.ರೇಖಾ ಉಮೇಶ್ ಅವರ ಒತ್ತಾಯಕ್ಕೆ ಮಣಿದು ಭೇಟಿ ನೀಡಿದ ಸಚಿವರು, ಸಮುದಾಯ ಆರೋಗ್ಯ ಕೇಂದ್ರ ಪರಿಶೀಲಿಸಿದರು.

ಆರೋಗ್ಯ ಕೇಂದ್ರದ ಕಟ್ಟಡವು ಪ್ರಯೋಜನವಾಗಿಲ್ಲ. ಹೀಗಾಗಿ ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಆಸ್ಪತ್ರೆಗೆ ಸೇರಿದ ಜಾಗದಲ್ಲಿ ಸಂತೆ ನಡೆಯುತ್ತಿದ್ದು, ಜಾಗದ ಬಗ್ಗೆ ದಾಖಲೆಗಳನ್ನು ನೀಡುವಂತೆ ಗ್ರಾಮ ಪಂಚಾಯ್ತಿ ಕಾರ್ಯದರ್ಶಿಗೆ ಸೂಚಿಸಿದರು.

ADVERTISEMENT

ಶುದ್ಧೀಕರಣ ಘಟಕ ಸ್ಥಾಪಿಸಿ ಶುದ್ಧ ನೀರು ಸರಬರಾಜು ಮಾಡಲು ಅಗತ್ಯ ಕ್ರಮ ಕೈಗೊಳ್ಳಲು ಅನುದಾನ ಬಿಡುಗಡೆ ಮಾಡಲು ಯೋಜನೆ ಸಿದ್ಧಪಡಿಸುವಂತೆ ಜಿಲ್ಲಾ ಪಂಚಾಯ್ತಿಯ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್‌ಗೆ ನಿರ್ದೇಶಿಸಿದರು.

ಪಟ್ಟಣದ ಪ್ರಮುಖ ರಸ್ತೆಯಾದ ಪೇಟೆಬೀದಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅನುದಾನ ಬಿಡುಗಡೆ ಮಾಡಿ ಶೀಘ್ರವೇ ಕೆಲಸ ಕೈಗೊತ್ತಿಕೊಳ್ಳಲು ಕ್ರಮ ಕೈಗೊಳ್ಳುವುದಾಗಿ ಸಚಿವರು ಭರವಸೆ ನೀಡಿದರು.

ಆರ್.ರೇಖಾ ಉಮೇಶ್, ಗ್ರಾಮ ಪಂಚಾಯ್ತಿ ಸದಸ್ಯೆ ಸದಸ್ಯ ಮಮತಾ, ಹೊಳೆಹೊನ್ನೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಹನುಮಂತು, ಜಿಲ್ಲಾ ಕಾಂಗ್ರೆಸ್‌ ಎಸ್‌.ಸಿ ಘಟಕದ ಅಧ್ಯಕ್ಷೆ ಪಲ್ಲವಿ, ನಗರ ಘಟಕದ ಅಧ್ಯಕ್ಷ ಸೋಮಶೇಖರ್, ಎಪಿಎಂಸಿ ಸದಸ್ಯ ಡಿ.ಬಿ.ಹಳ್ಳಿ ಬಸವರಾಜ್, ಕಾಂಗ್ರೆಸ್ ಮುಖಂಡರಾದ ಎನ್.ರವಿಕುಮಾರ್, ಶ್ರೀಧರ್, ಶೇಖರಪ್ಪ, ಸನಾವುಲ್ಲಾ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.