ADVERTISEMENT

ಗುಣಮಟ್ಟದ ಕಾಮಗಾರಿಗೆ ಶಾಸಕ ಮೇಟಿ ಸೂಚನೆ

ಹಳ್ಳೂರ-–ಸಂಗಾಪುರ ರಸ್ತೆ ಡಾಂಬರೀಕರಣ ಕಾಮಗಾರಿಗೆ ಶಾಸಕ ಮೇಟಿ ಭೂಮಿಪೂಜೆ

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2017, 9:36 IST
Last Updated 14 ಡಿಸೆಂಬರ್ 2017, 9:36 IST

ಬಾಗಲಕೋಟೆ: ‘ಮತಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳಲಾಗಿದೆ. ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು’ ಎಂದು ಶಾಸಕ ಎಚ್.ವೈ.ಮೇಟಿ ಗುತ್ತಿಗೆದಾರರಿಗೆ ಸೂಚಿಸಿದರು.

ತಾಲ್ಲೂಕಿನ ಹಳ್ಳೂರದಿಂದ ಸಂಗಾಪುರ ಗ್ರಾಮದವರೆಗೆ 1.3 ಕಿ.ಮೀ ರಸ್ತೆಯ ಸುಧಾರಣೆ (ಡಾಂಬರೀಕರಣ) ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

₹ 50 ಲಕ್ಷ ವೆಚ್ಚದಲ್ಲಿ ಕಾಮಗಾರಿ ನಡೆಯಲಿದೆ. ಅದರ ಗುಣಮಟ್ಟವನ್ನು ಅಧಿಕಾರಿಗಳು ಪರಿಶೀಲನೆ ನಡೆಸಬೇಕು. ಗ್ರಾಮಸ್ಥರು ಸಹ ಗುತ್ತಿಗೆದಾರರಿಗೆ ಸಹಕಾರ ನೀಡಬೇಕು ಎಂದರು.

ADVERTISEMENT

‘ಹಳ್ಳೂರ ಭಾಗದಲ್ಲಿ ಸಮುದಾಯ ಭವನ, ಗ್ರಾಮ ಚಾವಡಿ ಕಾಮಗಾರಿ, ಸಿಸಿ ರಸ್ತೆ ನಿರ್ಮಾಣ ಸೇರಿದಂತೆ ಅನೇಕ ಕಾಮಗಾರಿಗಳನ್ನು ಕೈಗೊಳ್ಳ ಲಾಗಿದೆ. ಗ್ರಾಮದ ಅಭಿವೃದ್ಧಿಗೆ ಬದ್ಧವಿರುವುದಾಗಿ’ ಹೇಳಿದರು.

ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಸಿ.ಆರ್.ಪರನಗೌಡರ ಮಾತನಾಡಿದರು.ಗ್ರಾಮ ಪಂಚಾಯ್ತಿ ಅಧ್ಯಕ್ಷೆ ರತ್ನಾಬಾಯಿ ಹಿರೇಮಠ, ಮಲ್ಲಮ್ಮ ಸುನಗದ, ಜಿಲ್ಲಾ
ಪಂಚಾಯ್ತಿ ಮಾಜಿ ಅಧ್ಯಕ್ಷ ಬಸವಂತಪ್ಪ ಮೇಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.