ADVERTISEMENT

ಜಮಖಂಡಿ: ಕೃಷ್ಣಾ ಪಾತ್ರದಲ್ಲಿ ಪ್ರವಾಹ ಭೀತಿ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2017, 5:35 IST
Last Updated 23 ಸೆಪ್ಟೆಂಬರ್ 2017, 5:35 IST
ಜಮಖಂಡಿ ತಾಲ್ಲೂಕಿನ ಚಿಕ್ಕಪಡಸಲಗಿ ಬ್ಯಾರೇಜ್ ಬಳಿ ಕೃಷ್ಣೆ ಮೈದುಂಬಿ ಹರಿಯುತ್ತಿರುವುದು
ಜಮಖಂಡಿ ತಾಲ್ಲೂಕಿನ ಚಿಕ್ಕಪಡಸಲಗಿ ಬ್ಯಾರೇಜ್ ಬಳಿ ಕೃಷ್ಣೆ ಮೈದುಂಬಿ ಹರಿಯುತ್ತಿರುವುದು   

ಬಾಗಲಕೋಟೆ: ಮಹಾರಾಷ್ಟ್ರ ಹಾಗೂ ಪಕ್ಕದ ಬೆಳಗಾವಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯ ಕೃಷ್ಣಾ ನದಿ ಪಾತ್ರದಲ್ಲಿ ಶುಕ್ರವಾರದಿಂದ ಪ್ರವಾಹದ ಭೀತಿ ಕಾಣಿಸಿಕೊಂಡಿದೆ.

ಜಮಖಂಡಿ ತಾಲ್ಲೂಕಿನ ಹಿಪ್ಪರಗಿ ಜಲಾಶಯಕ್ಕೆ 1.15 ಲಕ್ಷ ಕ್ಯುಸೆಕ್ಸ್‌ಗಿಂತಲೂ ಹೆಚ್ಚು ನೀರು ಹರಿದುಬರುತ್ತಿದ್ದು, ಅಷ್ಟೇ ಪ್ರಮಾಣದ ನೀರನ್ನು ಹೊರಗೆ ಬಿಡಲಾಗುತ್ತಿದೆ. ಇದರಿಂದ ಜಮಖಂಡಿ ತಾಲ್ಲೂಕಿನ 11 ಗ್ರಾಮಗಳಿಗೆ ಪೂರ್ಣ ಪ್ರಮಾಣದಲ್ಲಿ ಹಾಗೂ 16 ಗ್ರಾಮಗಳಿಗೆ ಭಾಗಶಃ ಪ್ರವಾಹ ಭೀತಿ ಎದುರಾಗಿದೆ.

ಶಿರಗುಪ್ಪಿ, ಮೈಗೂರು, ಮುತ್ತೂರು, ಕಂಕಣವಾಡಿ ಸೇರಿದಂತೆ ಒಟ್ಟು 27 ಗ್ರಾಮಗಳ ಜನರು ನದಿ ದಡಕ್ಕೆ ತೆರಳದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಪ್ರವಾಹ ಉಂಟಾದಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ಜಮಖಂಡಿಯ ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿಗೆ ಜಿಲ್ಲಾಧಿಕಾರಿ ಪಿ.ಎ.ಮೇಘಣ್ಣವರ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.