ADVERTISEMENT

ಜಯಮೃತ್ಯುಂಜಯ ಶ್ರೀ ವಿರುದ್ಧ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 15 ನವೆಂಬರ್ 2017, 5:10 IST
Last Updated 15 ನವೆಂಬರ್ 2017, 5:10 IST

ಹುನಗುಂದ(ಅಮೀನಗಡ): ವೀರಶೈವರನ್ನು ಕೀಳು ಭಾಷೆಯಲ್ಲಿ ನಿಂದಿಸಿ ಧಾರ್ಮಿಕ ಪರಂಪರೆಯನ್ನು ಘಾಸಿಗೊಳಿಸಿದ್ದಾರೆ ಎಂದು ಆರೋಪಿಸಿ ಕೂಡಲ ಸಂಗಮ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಶ್ರೀಗಳ ವಿರುದ್ಧ ವಿವಿಧ ಮಠಾಧೀಶರ ನೇತೃತ್ವದಲ್ಲಿ ಸೋಮವಾರ ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

ಪಟ್ಟಣದ ಬಸವಮಂಟಪದಿಂದ ಪ್ರತಿಭಟನೆ ಆರಂಭಿಸಿದ ವೀರಶೈವ ಲಿಂಗಾಯತ ಮುಖಂಡರು ಘೋಷಣೆ ಕೂಗುತ್ತಾ ಚನ್ನಮ್ಮನ ವೃತ್ತ, ಲಿಂಗದ ಕಟ್ಟೆ, ಮಹಾಂತೇಶ ವೃತ್ತ, ಗಾಂಧೀ ಚೌಕ, ಬಸ್‌ನಿಲ್ದಾಣ ಮಾರ್ಗದಿಂದ ತಹಶೀಲ್ದಾರ್ ಕಚೇರಿಗೆ ತೆರಳಿ ಮನವಿ ಪತ್ರ ಸಲ್ಲಿಸಿದರು.

ಅಮೀನಗಡ ಗಚ್ಚಿನಮಠದ ಪ್ರಭುರಾಜೇಂದ್ರ ಸ್ವಾಮೀಜಿ ಮಾತ ನಾಡಿ, ವೀರಶೈವ ಲಿಂಗಾಯತರು ಎಲ್ಲರೂ ಒಂದೇ ಎಂಬ ಭಾವನೆಯಿಂದ ಒಗ್ಗೂಡಿಕೊಂಡು ಹೋಗುತ್ತಿದ್ದಾರೆ. ಆದರೆ ಪಂಚಮಸಾಲಿ ಶ್ರೀಗಳು ಸಮಾಜದಲ್ಲಿ ಅಶಾಂತಿ ಉಂಟು ಮಾಡುತ್ತಿದ್ದಾರೆ. ಹುಬ್ಬಳ್ಳಿ ಸಮಾವೇಶದಲ್ಲಿ ಶ್ರೀಗಳು ಅಶ್ಲೀಲ ಪದ ಬಳಸಿ ಸಮಾಜದ ಸಾಮರಸ್ಯಕ್ಕೆ ಧಕ್ಕೆ ಉಂಟು ಮಾಡಿದ್ದಾರೆ' ಎಂದು ಆರೋಪಿಸಿದರು.

ADVERTISEMENT

ಕೈಗೊಳ್ಳಬೇಕು. ಯಾರ ಮನಸ್ಸಿಗೂ ನೋವುಂಟು ಮಾಡಬಾರದು ಎಂದರು. ಪಂಚಮಸಾಲಿ ಶ್ರೀಗಳ ಹೇಳಿಕೆ ಯನ್ನು ಖಂಡಿಸಿದ ಬಿಲ್‌ಕೆರೂರಿನ ಸಿದ್ಧಲಿಂಗ ಸ್ವಾಮೀಜಿ, ದಾಸಬಾಳದ ವೀರೇಶ್ವರ ಸ್ವಾಮೀಜಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು. ತಾಲ್ಲೂಕಿನ ವಿವಿಧ ಗ್ರಾಮ ಹಾಗೂ ಪಟ್ಟಣಗಳಿಂದ ಬಂದಿದ್ದ ವೀರಶೈವ ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.