ADVERTISEMENT

ತೋಟಗಾರಿಕೆ ವಿ.ವಿ: ಮೂವರಿಗೆ ಎನ್‌ಎಸ್‌ಎಸ್ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 20 ಮೇ 2017, 6:02 IST
Last Updated 20 ಮೇ 2017, 6:02 IST

ಬಾಗಲಕೋಟೆ: ರಾಷ್ಟ್ರೀಯ ಯುವ ಸೇವಾ ಯೋಜನೆಯ ಪ್ರಸಕ್ತ ಸಾಲಿನ ರಾಜ್ಯ ಪ್ರಶಸ್ತಿಗೆ  ಇಲ್ಲಿನ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಮೂವರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

ಎನ್. ಎಸ್. ಮಾನಸ, ಟಿ. ಎಂ. ನೀತು ಹಾಗೂ ಬಿ. ಕೆ. ತೇಜಕುಮಾರ್ ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.ವಿಧಾನಸೌಧದ ಬಾಂಕ್ವೆಟ್ ಹಾಲ್‌ನಲ್ಲಿ ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡಿದರು.

ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಹಾಗೂ ತೋಟಗಾರಿಕೆ ವಿಶ್ವವಿದ್ಯಾಲಯದ ಕುಲಪತಿ ಡಾ. ಡಿ. ಎಲ್. ಮಹೇಶ್ವರ್ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.