ADVERTISEMENT

ಬನಹಟ್ಟಿ: ಮಳೆಯಿಂದಾಗಿ ಮನೆಗೆ ನುಗ್ಗಿದ ನೀರು

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2017, 4:54 IST
Last Updated 16 ಅಕ್ಟೋಬರ್ 2017, 4:54 IST

ರಬಕವಿ ಬನಹಟ್ಟಿ: ನಗರದಲ್ಲಿ ಭಾನುವಾರ ಸಂಜೆ ಅರ್ಧ ಗಂಟೆಗೂ ಹೆಚ್ಚು ಸಮಯ ಉತ್ತಮ ಮಳೆಯಾಯಿತು. ರಸ್ತೆಗಳಲ್ಲಿ ಮಳೆ ನೀರು ಹೊಳೆಯಂತೆ ಹರಿಯುತ್ತಿದ್ದ ದೃಶ್ಯ ಕಂಡುಬಂತು.

ಭಾರಿ ಮಳೆಯಿಂದಾಗಿ ಅರುಣ ಟಾಕೀಸ್‌ ಸುತ್ತ ಮುತ್ತಲಿನ ಹಲವು ಮನೆಗಳಿಗೆ ನೀರು ನುಗ್ಗಿದ್ದು, ಮನೆಯವರು ನೀರು ಹೊರಹಾಕಲು ಹರಸಾಹಸ ಪಟ್ಟರು. ದಲಾಲ ಲೇನ್‌ನಲ್ಲಿ ಐದಾರು ಮನೆಗಳಿಗೂ ನೀರು ನುಗ್ಗಿದ ಬಗ್ಗೆ ವರದಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT