ADVERTISEMENT

ಮುಖ್ಯಮಂತ್ರಿ ಸ್ವಾಗತಕ್ಕೆ ಹಿಪ್ಪರಗಿ ಸಜ್ಜು

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2017, 5:07 IST
Last Updated 9 ನವೆಂಬರ್ 2017, 5:07 IST
ಬನಹಟ್ಟಿ ಸಮೀಪದ ಹಿಪ್ಪರಿಗಿ ಗ್ರಾಮಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬುಧವಾರ ಗ್ರಾಮಕ್ಕೆ ಭೇಟಿ ನೀಡಿದ ಸಚಿವೆ ಉಮಾಶ್ರೀ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
ಬನಹಟ್ಟಿ ಸಮೀಪದ ಹಿಪ್ಪರಿಗಿ ಗ್ರಾಮಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬುಧವಾರ ಗ್ರಾಮಕ್ಕೆ ಭೇಟಿ ನೀಡಿದ ಸಚಿವೆ ಉಮಾಶ್ರೀ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.   

ರಬಕವಿ-ಬನಹಟ್ಟಿ: ಸಮೀಪದ ಹಿಪ್ಪರಗಿಯ ಇಂಚಗೇರಿ ಮಠದ ಸಂಗಮೇಶ್ವರ ಮಹಾರಾಜರ 86ನೇ ಪುಣ್ಯಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಳ್ಳಲಿದ್ದಾರೆ. ಆಧ್ಯಾತ್ಮ ಸಪ್ತಾಹದ ಅಂಗವಾಗಿ ನೂತನವಾಗಿ ನಿರ್ಮಿಸಿರುವ ₹ 20 ಲಕ್ಷ ವೆಚ್ಚದ ಸಾಂಸ್ಕೃತಿಕ ಭವನ ಮತ್ತು ಸಭಾ ಮಂಟಪದ ಉದ್ಘಾಟನೆ ಹಾಗೂ ಏಕತಾ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಇದೇ ವೇಳೆ ನಡೆಯಲಿದೆ.

ಮುಖ್ಯಮಂತ್ರಿ ಭೇಟಿ ಹಿನ್ನೆಲೆಯಲ್ಲಿ ಬುಧವಾರ ಹಿಪ್ಪರಗಿಗೆ ಬಂದ ಸಚಿವೆ ಉಮಾಶ್ರೀ ಕಾರ್ಯಕ್ರಮದ ಸಿದ್ಧತೆ ಪರಿಶೀಲಿಸಿ ಅಧಿಕಾರಿಗಳು ಹಾಗೂ ಶ್ರೀಮಠದ ಪದಾಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

‘ಸಮಾರಂಭಕ್ಕೆ ಲಕ್ಷಾಂತರ ಜನ ಸೇರುವ ನಿರೀಕ್ಷೆ ಇದೆ. ತಾಲ್ಲೂಕು ಆಡಳಿತ ಹಾಗೂ ಪೊಲೀಸ್ ಇಲಾಖೆ ಸಕಲ ಸಿದ್ದತೆಗಳನ್ನು ಮಾಡಿಕೊಂಡಿವೆ. ಗ್ರಾಮದ ಸರ್ಕಾರಿ ಪದವಿಪೂರ್ವ ಮಹಾವಿದ್ಯಾಲಯ ಆವರಣದಲ್ಲಿ ಹೆಲಿಪ್ಯಾಡ್‌ ನಿರ್ಮಾಣ ಮಾಡಲಾಗಿದೆ’ ಎಂದು ಉಮಾಶ್ರೀ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.