ADVERTISEMENT

ಮೇಟಿ ಸಮ್ಮಖದಲ್ಲಿ ಸೇರ್ಪಡೆ

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2018, 5:32 IST
Last Updated 7 ಏಪ್ರಿಲ್ 2018, 5:32 IST

ಬಾಗಲಕೋಟೆ: ಇತ್ತೀಚೆಗೆ ಬಿಜೆಪಿ ಸೇರ್ಪಡೆಯಾಗಿದ್ದ ಸಮೀಪದ ಮುಚಖಂಡಿ ತಾಂಡಾದ ಕೆಲ ಯುವಕರು ಶಾಸಕ ಎಚ್.ವೈ.ಮೇಟಿ ಸಮ್ಮುಖದಲ್ಲಿ ಗುರುವಾರ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಪುನಃ ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು.

ಬಿಜೆಪಿಯ ಕೆಲ ನಾಯಕರು ತಾಂಡಾದ ಕೆಲ ಯುವಕರಿಗೆ ಸುಳ್ಳು ಹೇಳಿ ಕರೆದುಕೊಂಡು ಹೋಗಿ ಶಾಲು ಹಾಕಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದ್ದರು. ಆದರೆ ಶಾಸಕ ಮೇಟಿ ಅವರ ಅಭಿವೃದ್ಧಿ ಕಾರ್ಯಗಳನ್ನು ಗಮನಿಸಿ ಗ್ರಾಮದ ಹಿರಿಯರ ನೇತೃತ್ವದಲ್ಲಿ ಪುನಃ ಕಾಂಗ್ರೆಸ್‌ ಸೇರ್ಪಡೆಯಾಗುತ್ತಿರುವುದಾಗಿ ಮುಖಂಡರು ತಿಳಿಸಿದರು.

ಶಾಸಕ ಎಚ್.ವೈ.ಮೇಟಿ ಮಾತನಾಡಿ, ‘ಮುಚಖಂಡಿ ಕೆರೆ ತುಂಬಿಸುವ ಯೋಜನೆ ಮಾಡಲಾಗಿದೆ. ಪ್ರವಾಸೋದ್ಯಮ ಇಲಾಖೆಯಿಂದ ಅನುಮೋದನೆ ಪಡೆದು ಗ್ರಾಮವನ್ನು ಪ್ರವಾಸಿ ತಾಣವನ್ನಾಗಿ ಮಾಡಲು ಅನುಮೋದನೆ ಪಡೆಯಲಾಗಿದೆ. ಅಲ್ಲದೇ ಗ್ರಾಮೀಣ ಭಾಗದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಿದೆ. ಹೀಗಾಗಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸುವ ಮೂಲಕ ರಾಜ್ಯದಲ್ಲಿ ಮತ್ತೊಮ್ಮೆ ಸರ್ಕಾರ ರಚನೆಗೆ ಶ್ರಮಿಸಬೇಕು’ ಎಂದರು. ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ರಾಚಪ್ಪಣ್ಣ ಪಟ್ಟಣದ, ಮಹಿಳಾ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷೆ ರಕ್ಷಿತಾ ಈಟಿ, ಪ್ರಚಾರ ಸಮಿತಿ ಅಧ್ಯಕ್ಷ ಮಂಜುನಾಥ ವಾಸನದ, ಆನಂದ ಜಿಗಜಿನ್ನಿ, ನಾಗರಾಜ ಹದ್ಲಿ, ನಾರಾಯಣ ದೇಸಾಯಿ, ಎನ್.ಜಿ. ಕೋಟಿ, ಮಹೇಶ ಗದ್ದನಕೇರಿ, ನೂರ್ ಪಟ್ಟೆವಾಲಾ, ದ್ಯಾಮಣ್ಣ ಗಾಳಿ, ಆನಂದ ರಾಠೋಡ, ಥಾವರಪ್ಪ ಲಮಾಣಿ, ಭೀಮಪ್ಪ ನಾಯಕ, ಹರಸಿಂಗಪ್ಪ ರಾಠೋಡ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.