ADVERTISEMENT

ವರದಿ ಸಲ್ಲಿಸದ ಆರೋಪ: ಉಪನಿರ್ದೇಶಕ ಅಮಾನತು

​ಪ್ರಜಾವಾಣಿ ವಾರ್ತೆ
Published 29 ಏಪ್ರಿಲ್ 2017, 8:43 IST
Last Updated 29 ಏಪ್ರಿಲ್ 2017, 8:43 IST

ಬಾಗಲಕೋಟೆ:  ಕರ್ತವ್ಯಲೋಪದ ಆರೋಪದ ಮೇಲೆ ಇಲ್ಲಿನ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಅಶೋಕ ಕೆಲವಡಿ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.ಅಂಗನವಾಡಿ ಕೇಂದ್ರಗಳಿಗೆ ಪೂರೈಸುವ ಆಹಾರ ಪದಾರ್ಥಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಿ ಅದರ ವಿಶ್ಲೇಷಣಾ ವರದಿ ಸಲ್ಲಿಸದ ಅಶೋಕ ಕೆಲವಡಿ ಅವರನ್ನು ಸೇವೆಯಿಂದ ಅಮಾತುಗೊಳಿಸಿ ಇಲಾಖೆಯ ಅಧೀನ ಕಾರ್ಯದರ್ಶಿ ಜಯಲಕ್ಷ್ಮೀ ಗುರುವಾರ ಆದೇಶ ಹೊರಡಿಸಿದ್ದಾರೆ.

ಅಂಗನವಾಡಿ ಕೇಂದ್ರಗಳಿಗೆ ಪೂರೈಕೆ ಮಾಡುವ ಆಹಾರ ಪದಾರ್ಥಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಿ ವಿಶ್ಲೇಷಣಾ ವರದಿಯನ್ನು ಕೂಡಲೇ ಸಲ್ಲಿಸುವಂತೆ ಇಲಾಖೆಯಿಂದ ಸೂಚನೆ ನೀಡಲಾಗಿತ್ತು. ಪದಾರ್ಥ ಸರಿ ಇಲ್ಲ ಎಂದು ವರದಿ ಬಂದಲ್ಲಿ ಸಂಬಂಧಿಸಿದವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಹಾಗೂ ಬಿಲ್ ಪಾವತಿಸದೇ ತಡೆಹಿಡಿಯಬೇಕು ಎನ್ನುವ ನಿರ್ಣಯ ಕೈಗೊಳ್ಳಲಾಗಿತ್ತು.

ಈ ಬಗ್ಗೆ ಇಲಾಖೆಯ ಸಚಿವೆ ಉಮಾಶ್ರೀ ನಡೆಸಿದ ಪ್ರಗತಿ ಪರಿಶೀಲನೆ ಹಾಗೂ ಅನುಪಾಲನಾ ಕ್ರಮದ ಮಾಹಿತಿ ಸಭೆಯಲ್ಲಿ ಬಾಗಲಕೋಟೆಯ ಜಿಲ್ಲೆಯ ಅಧಿಕಾರಿ ಯಾವುದೇ ವರದಿ ಸಲ್ಲಿಸಿಲ್ಲ ಎಂಬುದು ಗೊತ್ತಾಗಿದೆ. ಇದು ಅವರ ಕರ್ತವ್ಯಲೋಪ ಎಂದು ಪರಿಗಣಿಸಿ ಸರ್ಕಾರ ಅವರನ್ನು ಸೇವೆಯಿಂದ ಅಮಾನತು ಮಾಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.