ADVERTISEMENT

ಹಿಂದುಳಿದ ವರ್ಗದ ನಾಯಕರಿಗೆ ಅನ್ಯಾಯವಾದರೆ ಸಹಿಸುವುದಿಲ್ಲ: ಸಿದ್ದರಾಮಾನಂದಪುರಿ ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 26 ಜನವರಿ 2017, 10:51 IST
Last Updated 26 ಜನವರಿ 2017, 10:51 IST
ಹಿಂದುಳಿದ ವರ್ಗದ ನಾಯಕರಿಗೆ ಅನ್ಯಾಯವಾದರೆ ಸಹಿಸುವುದಿಲ್ಲ: ಸಿದ್ದರಾಮಾನಂದಪುರಿ ಸ್ವಾಮೀಜಿ
ಹಿಂದುಳಿದ ವರ್ಗದ ನಾಯಕರಿಗೆ ಅನ್ಯಾಯವಾದರೆ ಸಹಿಸುವುದಿಲ್ಲ: ಸಿದ್ದರಾಮಾನಂದಪುರಿ ಸ್ವಾಮೀಜಿ   

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂ‌ಕಿನ ಕೂಡಲಸಂಗಮದಲ್ಲಿ ಗುರುವಾರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಮಾವೇಶ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ನೇತ್ರತ್ವದಲ್ಲಿ ಆರಂಭವಾಗಿದ್ದು, 50 ಸಾವಿರಕ್ಕೂ ಹೆಚ್ಚು ಜನ ಭಾಗಿಯಾಗಿದ್ದಾರೆ.

ಸಮಾವೇಶದಲ್ಲಿ ಮಾತನಾಡಿದ ಕಾಗಿನೆಲೆ ಪೀಠದ ತಿಂಥಿಣಿ ಶಾಖಾ ಮಠದ ಸಿದ್ದರಾಮಾನಂದಪುರಿ ಸ್ವಾಮೀಜಿ, ‘ಈಶ್ವರಪ್ಪ ನೆಪ ಮಾತ್ರ. ಬ್ರಿಗೇಡ್ ಮುಂದುವರಿಯಲಿದೆ. ಹಿಂದುಳಿದ ವರ್ಗದ ನಾಯಕರಿಗೆ ಅನ್ಯಾಯವಾದರೆ ಸಹಿಸೊಲ್ಲ. ಅಧಿಕಾರ ಕೆಲವೇಕೆಲವು ವರ್ಗದ ಕಪಿಮುಷ್ಠಿಯಲ್ಲಿದೆ. ಅದು ಹಂಚಿಕೆಯಾಗಬೇಕು ಎಂದರು.

‘ಬಸವಣ್ಣನ ಜಾತಿಯವರು ಎಂದುಕೊಳ್ಳುತ್ತೇವೆ ಆದರೆ ಆತನ ಆಶಯವಾದ ಸಾಮಾಜಿಕ ನ್ಯಾಯ ಪಾಲನೆ ಮಾಡುವುದಿಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪರೋಕ್ಷವಾಗಿ ಸ್ವಾಮೀಜಿ ಚಾಟಿ ಬೀಸಿದರು.

ADVERTISEMENT

ವಿಧಾನ ಪರಿಷತ್ ಸದಸ್ಯ ಸೋಮಣ್ಣ ಬೇವಿನಮರದ ಹಾಗೂ ಮಾಜಿ ಸಚಿವ ಎಸ್.ಎ.ರವೀಂದ್ರನಾಥ್‌, ಸೊಗಡು ಶಿವಣ್ಣ, ಮಾಜಿ ಶಾಸಕರಾದ ಬಸವರಾಜ ನಾಯ್ಕ, ನೇಮಿರಾಜ ನಾಯ್ಕ, ಸೋಮಲಿಂಗಪ್ಪ, ಡಾ.ಎ.ಎಚ್. ಶಿವಯೋಗಿ ಸ್ವಾಮಿ, ಬಿಬಿಎಂಪಿ ಮಾಜಿ ಮೇಯರ್ ವೆಂಕಟೇಶ ಮೂರ್ತಿ, ಮುಕುಡಪ್ಪ, ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಮತ್ತಿತರರು ಭಾಗಿಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.