ADVERTISEMENT

ಮನಸೆಳೆದ ಮೆಹಂದಿ, ರಂಗೋಲಿ ಚಿತ್ತಾರ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2018, 6:11 IST
Last Updated 3 ಫೆಬ್ರುವರಿ 2018, 6:11 IST

ಬಾದಾಮಿ: ಪುಲಿಕೇಶಿ ಬ್ಯಾಂಕಿನ ಸುವರ್ಣ ಸಂಭ್ರಮದ ಆಚರಣೆಯಲ್ಲಿ ಮಹಿಳೆಯರಿಗೆ ಮತ್ತು ವಿದ್ಯಾರ್ಥಿನಿಯರಿಗೆ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ. ಸದುಪಯೋಗ ಪಡೆಯಬೇಕು ಎಂದು ಬ್ಯಾಂಕಿನ ಅಧ್ಯಕ್ಷ ಹಾಗೂ ಮಾಜಿ ಶಾಸಕ ಎಂ.ಕೆ. ಪಟ್ಟಣಶೆಟ್ಟಿ ಹೇಳಿದರು.

ಇಲ್ಲಿನ ವೀರಪುಲಿಕೇಶಿ ಸಹಕಾರಿ ಬ್ಯಾಂಕಿನ ಸುವರ್ಣ ಮಹೋತ್ಸವ ಅಂಗವಾಗಿ ವೀರಪುಲಿಕೇಶಿ ವಿದ್ಯಾ ಸಂಸ್ಥೆಯಲ್ಲಿ ಗುರುವಾರ ಹಮ್ಮಿಕೊಂಡ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅವರು ಚಾಲನೆ ನೀಡಿದರು.

ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನಗಳನ್ನು ಕೊಡಲಾಗುವುದು. ಸುವರ್ಣ ಮಹೋತ್ಸವ ಅಂಗವಾಗಿ 15 ದಿನಗಳವರೆಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡ ಬಗ್ಗೆ ಹೇಳಿದರು.

ADVERTISEMENT

ಮಹಿಳೆಯರಿಗೆ, ವಿದ್ಯಾರ್ಥಿನಿಯರಿಗೆ ಮೆಹಂದಿ, ರಂಗೋಲಿ ಮತ್ತು ಬಟ್ಟೆಯಲ್ಲಿ ಪೇಂಟಿಂಗ್‌ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಇನ್ನೂರಕ್ಕೂ ಅಧಿಕ ಮಹಿಳೆಯರು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು.

ಬ್ಯಾಂಕಿನ ಮಾಜಿ ಅಧ್ಯಕ್ಷ ಎ.ಸಿ. ಪಟ್ಟಣದ, ಎನ್‌.ಎಸ್‌. ಬೊಮ್ಮನಗೌಡರ, ಆರ್‌.ಆರ್‌. ಪಾಟೀಲ, ಎನ್‌.ಡಿ. ದೊಡ್ಡನಿಂಗಪ್ಪನವರ, ನೀಲನಗೌಡ ಗೌಡರ, ಶರಣಪ್ಪ ಕಲಬಾಶೆಟ್ಟಿ, ನಿಂಗಪ್ಪ ಹೊಸಮನಿ, ಅಂದಾನಗೌಡ ಪಾಟೀಲ ಮೊದಲಾದವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.