ADVERTISEMENT

ಉದ್ಯೋಗ ಮೀಸಲಾತಿ ಕಲ್ಪಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2017, 8:59 IST
Last Updated 12 ಡಿಸೆಂಬರ್ 2017, 8:59 IST
ಉದ್ಯೋಗ ಕ್ಷೇತ್ರದಲ್ಲಿ ಶೇ.5 ರಷ್ಟು ಮೀಸಲಾತಿಯನ್ನು ನೀಡಬೇಕು ಎಂದು ಒತ್ತಾಯಿಸಿ ರಾಜ್ಯ ಅಂಗವಿಕಲರ ಒಕ್ಕೂಟದ ಜಿಲ್ಲಾ ಘಟಕದ ಸದಸ್ಯರು ಬಳ್ಳಾರಿಯ ಹೆಚ್ಚುವರಿ ಜಿಲ್ಲಾಧಿಕಾರಿ ಸೋಮಶೇಖರ್ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು
ಉದ್ಯೋಗ ಕ್ಷೇತ್ರದಲ್ಲಿ ಶೇ.5 ರಷ್ಟು ಮೀಸಲಾತಿಯನ್ನು ನೀಡಬೇಕು ಎಂದು ಒತ್ತಾಯಿಸಿ ರಾಜ್ಯ ಅಂಗವಿಕಲರ ಒಕ್ಕೂಟದ ಜಿಲ್ಲಾ ಘಟಕದ ಸದಸ್ಯರು ಬಳ್ಳಾರಿಯ ಹೆಚ್ಚುವರಿ ಜಿಲ್ಲಾಧಿಕಾರಿ ಸೋಮಶೇಖರ್ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು   

ಬಳ್ಳಾರಿ: ಅಂಗವಿಕಲರು ಸರ್ಕಾರಿ ಮತ್ತು ಖಾಸಗಿ ಉದ್ಯೋಗ ಕ್ಷೇತ್ರಗಳಲ್ಲಿ ಶೇ 5 ರಷ್ಟು ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ರಾಜ್ಯ ಅಂಗವಿಕಲರ ಒಕ್ಕೂಟದ ಜಿಲ್ಲಾ ಘಟಕದ ಸದಸ್ಯರು ನಗರದ ಹೆಚ್ಚುವರಿ ಜಿಲ್ಲಾಧಿಕಾರಿ ಸೋಮಶೇಖರ್ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.

‘ಉದ್ಯೋಗದಲ್ಲಿ ಮೀಸಲಾತಿ ನೀಡಬೇಕು ಎಂದು ಈಗಾಗಲೇ ಸುಪ್ರೀಂಕೋರ್ಟ್‌ ಆದೇಶ ನೀಡಿದೆ. ಆದರೆ, ಸರ್ಕಾರ ಆದೇಶವನ್ನು ಪಾಲಿಸುತ್ತಿಲ್ಲ. ಇದರಿಂದ ಅಂಗವಿಕಲರಿಗೆ ಅನ್ಯಾಯವಾಗುತ್ತಿದೆ. ಕೂಡಲೇ ಮೀಸಲಾತಿ ನೀಡಲು ಕ್ರಮ ಕೈಗೊಳ್ಳಬೇಕು’ ಎಂದು ಒಕ್ಕೂಟದ ಜಿಲ್ಲಾ ಘಟಕದ ಅಧ್ಯಕ್ಷ ಎನ್‌.ಕುಮಾರಪ್ಪ ಆಗ್ರಹಿಸಿದರು.

‘ಪ್ರತಿ ತಿಂಗಳು ಕುಂದು ಕೊರತೆ ಸಭೆ ನಡೆಸಿ ಅಂಗವಿಲಕರ ಸಮಸ್ಯೆಗಳನ್ನು ಇತ್ಯರ್ಥ ಪಡಿಸಬೇಕು. ಬಡತನದಲ್ಲಿರುವವರಿಗೆ ಭಾಗ್ಯಜ್ಯೋತಿ ಮತ್ತು ಕುಟೀರ ಜ್ಯೋತಿ ವಿದ್ಯುತ್‌ ಸಂಪರ್ಕ ಕಲ್ಪಿಸಬೇಕು. ಅಂಗವಿಕಲರಿಗೆ ಪಂಚಾಯತ್‌ ರಾಜ್‌ ಮತ್ತು ಗ್ರಾಮೀಣ ಅಭಿವೃದ್ಧಿ ಯೋಜನೆಗಳಲ್ಲಿ ಶೇ 4 ರಷ್ಟು ಅನುದಾನ ಮೀಸಲಿಡಬೇಕು. ಅಂಗವಿಕಲರ ಕಾಯ್ದೆ 1995ರ ಅನ್ನು ಸಮರ್ಪಕವಾಗಿ ಅನುಷ್ಟಾನ ಮಾಡಬೇಕು. ಮಾಸಾಶನವನ್ನು ನಿಗದಿತ ಸಮಯದಲ್ಲಿ ವಿತರಣೆ ಮಾಡಬೇಕು. ನಿರಾಶ್ರಿತರಿಗೆ ನಿವೇಶನ ಸಹಿತ ವಸತಿ ಸೌಲಭ್ಯ ಕಲ್ಪಿಸಬೇಕು. ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನೀಡಬೇಕು’ ಎಂದು ಒತ್ತಾಯಿಸಿದರು.

ADVERTISEMENT

‘ಅಂಗವಿಕಲರ ಮನೆಗಳಿಗೆ ಉಚಿತವಾಗಿ ಕುಡಿಯುವ ನೀರಿನ ಸೌಲಭ್ಯ ಒದಗಿಸಬೇಕು. ಅಂಗವಿಕಲರ ಶ್ರೇಯೋಭಿವೃದ್ಧಿಗೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಇಲಾಖೆವಾರು ಪ್ರಚಾರಪಡಿಸಬೇಕು. ಅವರಿಗೆ ನಿರುದ್ಯೋಗ ಭತ್ಯೆ ಕಲ್ಪಿಸಬೇಕು. ಆರ್ಥಿಕವಾಗಿ ಸಬಲೀಕರಣ ಹೊಂದಲು ಸಾಲಸೌಲಭ್ಯ ನೀಡಬೇಕು’ ಎಂದು ಆಗ್ರಹಿಸಿದರು. ಅಂಗವಿಕಲರಾದ ಚಾಗನೂರು ನಾಗರಾಜ, ಅಡಿವೆಮ್ಮ, ಭಾಗ್ಯಮ್ಮ, ಲಕ್ಷ್ಮೀ, ರುದ್ರವೇಣಿ, ಶಿರವಾರ ಗ್ಯಾನಪ್ಪ, ರಾಮನಾಯಕ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.