ADVERTISEMENT

‘ಎಚ್ಐವಿ ಸೋಂಕಿತರಿಗೆ ಕಾನೂನು ನೆರವು’

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2017, 8:32 IST
Last Updated 2 ಡಿಸೆಂಬರ್ 2017, 8:32 IST
ವಿಶ್ವ ಏಡ್ಸ್‌ ದಿನಾಚರಣೆ ಅಂಗವಾಗಿ ಬಳ್ಳಾರಿಯಲ್ಲಿ ಶುಕ್ರವಾರ ನಡೆದ ಜಾಗೃತಿ ಮೆರವಣಿಗೆಯಲ್ಲಿ ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು
ವಿಶ್ವ ಏಡ್ಸ್‌ ದಿನಾಚರಣೆ ಅಂಗವಾಗಿ ಬಳ್ಳಾರಿಯಲ್ಲಿ ಶುಕ್ರವಾರ ನಡೆದ ಜಾಗೃತಿ ಮೆರವಣಿಗೆಯಲ್ಲಿ ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು   

ಬಳ್ಳಾರಿ: ‘ನಗರದ ವಿಮ್ಸ್ ಆಸ್ಪತ್ರೆ, ಹಾಗೂ ಸಿರುಗುಪ್ಪ, ಹೊಸಪೇಟೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎ.ಆರ್‌.ಟಿ ಕೇಂದ್ರಗಳಿಗೆ ಪ್ರತಿ ಶನಿವಾರ ಸರ್ಕಾರಿ ವಕೀಲರು ಭೇಟಿ ನೀಡಿ ಸಂತ್ರಸ್ತರಿಗೆ ಕಾನೂನು ನೆರವು ನೀಡಲಿದ್ದಾರೆ’ ಎಂದು ಒಂದನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಎಸ್.ಬಿ.ಹಂದ್ರಾಳ್ ತಿಳಿಸಿದರು.

ನಗರದ ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಏರ್ಪಡಿಸಿದ್ದ ವಿಶ್ವ ಏಡ್ಸ್‌ ದಿನಾಚರಣೆಯಲ್ಲಿ ಮಾತನಾಡಿದ ಅವರು, ‘ಸೋಂಕಿತರ ಕೌಟುಂಬಿಕ ಸಮಸ್ಯೆಗಳಿಗೆ ವಕೀಲರು ಪರಿಹಾರ ದೊರಕಿಸುತ್ತಾರೆ. ಕಾನೂನು ಸೇವಾ ಪ್ರಾಧಿಕಾರದ ಮೂಲಕವೂ ನೆರವು ನೀಡಲಾಗುವುದು’ ಎಂದರು.

ಕಾರ್ಯಕ್ರಮಕ್ಕೂ ಮುನ್ನ ನಡೆದ ಜಾಗೃತಿ ಮೆರವಣಿಗೆಯನ್ನು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸಿ.ಭಾರತಿ ಉದ್ಘಾಟಿಸಿದರು. ಸದಸ್ಯೆ ಸೌಭಾಗ್ಯ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ರಮೇಶ ಬಾಬು, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಎಚ್.ನಿಜಾಮುದ್ದೀನ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ, ವಕೀಲರ ಸಂಘದ ಅಧ್ಯಕ್ಷ ಡಿ.ಎಸ್.ಬದರಿನಾಥ, ಕಾರ್ಯದರ್ಶಿ ಜಿ.ಎಂ.ರವಿರಾಜಶೇಖರರೆಡ್ಡಿ, ಶುಶ್ರೂಷಕರ ತರಬೇತಿ ಕೇಂದ್ರದ ಪ್ರಾಚಾರ್ಯ ಕೆ.ವೆಂಕಟೇಶಮೂರ್ತಿ, ನಿತ್ಯಜೀವನ ಸೇವಾಸಂಸ್ಥೆಯ ಅಧ್ಯಕ್ಷ ಶ್ರೀನಿವಾಸ, ಏಡ್ಸ್ ನಿಯಂತ್ರಣ ಘಟಕದ ಜಿಲ್ಲಾ ಮೇಲ್ವಿಚಾರಕ ಡಿ.ಗಿರೀಶ ಇದ್ದರು.

ADVERTISEMENT

ಆಶಾ ಕಾರ್ಯಕರ್ತಯರು,ವಿಮುಕ್ತಿ ಮಹಿಳಾ ಸಂಘ, ಫ್ಯಾಮಿಲಿ ಪ್ಲಾನಿಂಗ್‌ ಅಸೋಸಿಯೇಶನ್‌ ಆಫ್‌ ಇಂಡಿಯಾ, ಸೌಖ್ಯ ಬೆಳಕು ಸಮುದಾಯ ಸೇವಾ ಸಂಸ್ಥೆಯ ಸದಸ್ಯರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.