ADVERTISEMENT

ನ್ಯಾಯಾಲಯಕ್ಕೆ ಹಾಜರಾದ ಈಶ್ವರಪ್ಪ

​ಪ್ರಜಾವಾಣಿ ವಾರ್ತೆ
Published 12 ಮೇ 2017, 11:28 IST
Last Updated 12 ಮೇ 2017, 11:28 IST
ಬಳ್ಳಾರಿ: ಬಳ್ಳಾರಿ ಗ್ರಾಮೀಣ ಕ್ಷೇತ್ರದ ಉಪಚುನಾವಣೆ ನೀತಿಸಂಹಿತೆ ಉಲ್ಲಂ ಘನೆ ಪ್ರಕರಣಕ್ಕೆ ಸಂಬಂಧಿಸಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಇಲ್ಲಿನ ಜಿಲ್ಲಾ ನ್ಯಾಯಾ ಲಯಕ್ಕೆ ಗುರುವಾರ ಹಾಜರಾದರು.
 
ಕ್ಷೇತ್ರದ ಶಾಸಕರಾಗಿದ್ದ ಶ್ರೀರಾಮುಲು 2011ರಲ್ಲಿ ರಾಜೀನಾಮೆ ನೀಡಿದ ಬಳಿಕ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಗಾದಿಲಿಂಗಪ್ಪ ಪರ ಮತಯಾಚನೆಗೆ ಈಶ್ವರಪ್ಪ ಬಂದಿದ್ದರು.
 
ತಾಲೂಕಿನ ಸಂಗನಕಲ್ಲು ಗ್ರಾಮದ ದೇವ ಸ್ಥಾನದಲ್ಲಿ ಪೂಜೆ ಸಲ್ಲಿಸಿ ಮತಯಾಚಿಸಿ ದ್ದರು. ಮಂಗಳಾರತಿ ತಟ್ಟೆಗೆ ಹಣ ಹಾಕಿ ದ್ದರು. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. 
 
‘ಆರು ವರ್ಷದಿಂದ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಅನೇಕ ಬಾರಿ ಸಮನ್ಸ್ ಬಂದಿದ್ದರೂ ಹಾಜರಾಗಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಇಂದು ವಿಚಾರಣೆಗೆ ಹಾಜರಾಗಿದ್ದೆ’ ಎಂದು ಈಶ್ವರಪ್ಪ ಸುದ್ದಿಗಾರರಿಗೆ ತಿಳಿಸಿದರು. 
 
ಇದೇ ಸಂದರ್ಭದಲ್ಲಿ ಅವರು ರಾಜ್ಯ ಸರ್ಕಾರದ ಕಾರ್ಯವೈಖರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.  ‘ಸರ್ಕಾರ ಮರಳು ಮತ್ತು ಭೂ ಮಾಫಿಯಾ ಕೈಯಲ್ಲಿ ನಲುಗುತ್ತಿದೆ. ಅದನ್ನು ಕಾಂಗ್ರೆಸ್ ಪಕ್ಷದ ಶಾಸಕರೇ ಆ ಪಕ್ಷದ ಉಸ್ತುವಾರಿ ವೇಣುಗೋಪಾಲ ಅವರ ಮುಂದೆ ಹೇಳಿಕೊಂಡಿದ್ದಾರೆ’ ಎಂದು ಆರೋಪಿಸಿದರು.
 
‘ಎ.ಸಿ ಕೊಠಡಿಯಲ್ಲಿ ಕುಳಿತು ವಿಡಿಯೊ ಸಂವಾದ ನಡೆಸಿದರೆ ಬರ ಗಾಲ ಪರಿಹಾರವಾಗುವುದಿಲ್ಲ. ಬರಗಾಲ ಪೀಡಿತ ಪ್ರದೇಶಗಳಿಗೆ ಭೇಟಿ ನೀಡ ಬೇಕು. ಆದರೆ ಆ ಕೆಲಸ ನಡೆಯುತ್ತಿಲ್ಲ’ ಎಂದು ದೂರಿದರು. ರಾಯಣ್ಣ ಬ್ರಿಗೇಡ್‌ ಚಟುವಟಿಕೆ ಕುರಿತು ಪ್ರತಿಕ್ರಿಯೆ ನೀಡಲು ಅವರು ನಿರಾಕರಿಸಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.