ADVERTISEMENT

ಪಂಜಿನ ಮೆರವಣಿಗೆ ಮೂಲಕ ಮತದಾರ ಜಾಗೃತಿ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2018, 6:23 IST
Last Updated 23 ಏಪ್ರಿಲ್ 2018, 6:23 IST
ಕುರುಗೋಡು ತಾಲ್ಲೂಕಿನ ಕೋಳೂರು ಗ್ರಾಮದಲ್ಲಿ ಶನಿವಾರ ತಾಲ್ಲೂಕು ಪಂಚಾಯಿತಿ ವತಿಯಿಂದ ಪಂಜಿನ ಮೆರವಣಿಗೆ ನಡೆಸಿ ಮತದಾನ ಜಾಗೃತಿ ಮೂಡಿಸಿದರು.
ಕುರುಗೋಡು ತಾಲ್ಲೂಕಿನ ಕೋಳೂರು ಗ್ರಾಮದಲ್ಲಿ ಶನಿವಾರ ತಾಲ್ಲೂಕು ಪಂಚಾಯಿತಿ ವತಿಯಿಂದ ಪಂಜಿನ ಮೆರವಣಿಗೆ ನಡೆಸಿ ಮತದಾನ ಜಾಗೃತಿ ಮೂಡಿಸಿದರು.   

ಕುರುಗೋಡು: ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳು ಮತ್ತು ಸಿಬ್ಬಂದಿ ತಾಲ್ಲೂಕಿನ ಕೋಳೂರು ಗ್ರಾಮದಲ್ಲಿ ಶನಿವಾರ ಸಂಜೆ ಪಂಜಿನ ಮೆರವಣಿಗೆ ನಡೆಸಿ ಜನರಲ್ಲಿ ಮತದಾನ ಜಾಗೃತಿ ಮೂಡಿಸಿದರು.

ಹಣಕ್ಕೆ ಮತ ಮಾರಿಕೊಳ್ಳಬೇಡಿ, ಅಭಿವೃದ್ಧಿ ಬಗ್ಗೆ ಕಾಳಜಿ ಇರುವ ಅಭ್ಯರ್ಥಿಗೆ ಮತ ನೀಡಿ, ಮತದಾನ ನಮ್ಮ ಹಕ್ಕು ಎನ್ನುವ ಘೋಷಣೆಗಳನ್ನು ಕೂಗಿದರು.

ಬಳ್ಳಾರಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಜಾನಕಿ ರಾಮ್ ಜಾಥಕ್ಕೆ ಚಾಲನೆ ನೀಡಿ ಮಾತನಾಡಿ, ಮೇ 12ರಂದು ನಡೆಯವ ವಿಧಾನಸಭಾ ಚುನಾವಣೆಯಲ್ಲಿ ತಾಲ್ಲೂಕಿನಲ್ಲಿ ಅತಿ ಹೆಚ್ಚು ಮತದಾನ ಮಾಡಿ ಜಿಲ್ಲೆಗೆ ಮಾದರಿಯಾಗಬೇಕು ಎಂಬ ಉದ್ದೇಶದಿಂದ ಮತದಾರರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಪ್ರಜ್ಞಾವಂತ ಮತದಾರರು ತಪ್ಪದೆ ಮತದಾನ ಮಾಡಿ ಎಂದು ಸಲಹೆ ನೀಡಿದರು.

ADVERTISEMENT

ಯೋಜನಾ ನಿರ್ದೇಶಕ ಚಂದ್ರಶೇಖರ್ ಗುಡಿ ಮಾತನಾಡಿದರು.ಗ್ರಾಮ ಪಂಚಾಯಿತಿ ಕಚೇರಿಯಿಂದ ಪ್ರಾರಂಭಗೊಂಡ ಜಾಥಾ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಮಹಿಳಾ ಮತ್ತು ಶಿಶು ಅಭಿವೃದ್ಧಿ ಅಧಿಕಾರಿ ಕೃಷ್ಣಮ್ಮ, ವಿವಿಧ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವೆಂಕಟಮ್ಮ, ಜುಬೇದಾ, ಸಂಧ್ಯಾರಾಣಿ, ಬಸವನ ಗೌಡ, ಪರಶುರಾಮ್ ಮತ್ತು ವೆಂಕಾರೆಡ್ಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.