ADVERTISEMENT

‘ಪ್ರಜಾಹಿತ ಕಾಪಾಡಿದ ಟಿಪ್ಪು’

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2017, 5:15 IST
Last Updated 11 ನವೆಂಬರ್ 2017, 5:15 IST
ಕೂಡ್ಲಿಗಿಯ ಚಂದ್ರಶೇಖರ್ ಆಜಾದ್ ರಂಗ ಮಂದಿರದಲ್ಲಿ ಶನಿವಾರ ತಾಲ್ಲೂಕು ಆಡಳಿತ ಏರ್ಪಡಿಸಿದ್ದ ಟಿಪ್ಪು ಸುಲ್ತಾನ್ ಜಯಂತಿಯಲ್ಲಿ ಟಿಪ್ಪು ಭಾವಚಿತ್ರಕ್ಕೆ ಕಾಂಗ್ರೆಸ್‌ ಮುಖಂಡ ಎನ್.ಎಂ. ನಬೀ ಹೂ ಅರ್ಪಿಸಿದರು.
ಕೂಡ್ಲಿಗಿಯ ಚಂದ್ರಶೇಖರ್ ಆಜಾದ್ ರಂಗ ಮಂದಿರದಲ್ಲಿ ಶನಿವಾರ ತಾಲ್ಲೂಕು ಆಡಳಿತ ಏರ್ಪಡಿಸಿದ್ದ ಟಿಪ್ಪು ಸುಲ್ತಾನ್ ಜಯಂತಿಯಲ್ಲಿ ಟಿಪ್ಪು ಭಾವಚಿತ್ರಕ್ಕೆ ಕಾಂಗ್ರೆಸ್‌ ಮುಖಂಡ ಎನ್.ಎಂ. ನಬೀ ಹೂ ಅರ್ಪಿಸಿದರು.   

ಕೂಡ್ಲಿಗಿ: ‘ತನ್ನ ಮಕ್ಕಳೆನ್ನೇ ಒತ್ತೆ ಇಟ್ಟು ಪ್ರಜೆಗಳ ಹಿತ ಕಾಪಾಡಿದ ಕೀರ್ತಿ ಟಿಪ್ಪು ಸುಲ್ತಾನ್‌ಗೆ ಸಲ್ಲುತ್ತದೆ’ ಎಂದು ಮುಖಂಡ ಎನ್.ಎಂ. ನಬೀ ಅಭಿಪ್ರಾಯಪಟ್ಟರು.
ಪಟ್ಟಣದ ಚಂದ್ರಶೇಖರ್ ಆಜಾದ್ ರಂಗ ಮಂದಿರದಲ್ಲಿ ಶನಿವಾರ ತಾಲ್ಲೂಕು ಆಡಳಿತ ಏರ್ಪಡಿಸಿದ್ದ ಟಿಪ್ಪು ಸುಲ್ತಾನ್ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಬ್ರಿಟಿಷರು ಹಾನಿ ಮಾಡಿದ್ದ ಹಿಂದೂ ದೇವಾಲಯಗಳನ್ನು ಪುನರ್‌ಸ್ಥಾಪನೆ ಮಾಡಿಸಿದ್ದ ದೊರೆ ಟಿಪ್ಪು. ಅಂಥ ಧರ್ಮ ಸಹಿಷ್ಣುವನ್ನು ಮತಾಂಧ ಎಂದ ಕರೆಯುವದು ತಪ್ಪು’ ಎಂದರು.

‘ವಿರೋಧ ಪಕ್ಷಗಳ ತೀವ್ರ ವಿರೋಧದ ಮಧ್ಯಯೂ ಸರ್ಕಾರ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ಮಾಡುತ್ತಿರುವುದು ಸ್ವಾಗತಾರ್ಹ’ ಎಂದರು. ತಹಶೀಲ್ದಾರ್ ಎಲ್. ಕೃಷ್ಣಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ಪಟ್ಟಣ ಪಂಚಾಯ್ತಿ ಸದಸ್ಯರಾದ ನೂರ್ ಆಹಮದ್, ಟಿ. ವೆಂಕಟೇಶ, ಎಲ್.ಎಸ್. ಬಷೀರ್ ಆಹಮದ್, ಕೆಪಿಸಿಸಿ ಕಾರ್ಯದರ್ಶಿ ಹಿರೇಕುಂಬಳಗುಂಟೆ ಉಮೇಶ್, ಕೂಡ್ಲಿಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೋಗಳಿ ಮಂಜುನಾಥ, ಹೊಸಹಳ್ಳಿ ಬ್ಲಾಕ್ ಅಧ್ಯಕ್ಷ ವೀರೇಶ್ ಬಾಬು, ಮುಸ್ಲಿಂ ಮುಖಂಡರಾದ ಮಾದೇಹಳ್ಳಿ ನಜೀರ್ ಸಾಬ್, ಎಂ. ನೂರಲ್ಲಾ, ಜಿಲಾನ್ ಬಾಷಾ, ಅಮೀರ್, ಟಿಪ್ಪು ಅಭಿಮಾನಿಗಳ ಮಹಾವೇದಿಕೆಯ ಅಧ್ಯಕ್ಷ ಎಚ್. ಖಾಸೀಂ ಅಲಿ, ವಿಎಸ್‌ಎಸ್‌ಎನ್ ನಿವೃತ್ತ ಕಾರ್ಯದರ್ಶಿ ಜೆ. ಕೊತ್ಲಪ್ಪ ಇದ್ದರು.

ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ಪದವಿ ತರಗತಿಗಳಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮುಸ್ಲಿಂ ವಿದ್ಯಾರ್ಥಿಗಳಿಗೆ ಇದೇ ಸಂದರ್ಭದಲ್ಲಿ ಗಣ್ಯರು ಬಹುಮಾನ ವಿತರಿಸಿದರು. ನಂತರ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಿದರು.
 

ADVERTISEMENT

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.